ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯ ಶಿಫಾರಸುಗಳ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರೀಯ ಮೂಲನಿವಾಸಿ ಮಂಚ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಚ್‌ನ ಅಧ್ಯಕ್ಷ ಜೆ.ಸಿ. ಪ್ರಕಾಶ್, ‘ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಅಧಿವೇಶನ ಕರೆದು, ಆಯೋಗದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಮಾದಿಗ ಜನಾಂಗದ ಮೂಲಪುರುಷನಾದ ಸಾಮ್ರಾಟ್ ಅಶೋಕನ ಜಯಂತಿಯನ್ನು ಸರ್ಕಾರ ಆಚರಿಸಿ, ರಜೆ ನೀಡಬೇಕು. ಅಶೋಕನ ಪುತ್ಥಳಿಯನ್ನು ವಿಧಾನಸೌಧದ ಮುಂಭಾಗ ಪ್ರತಿಷ್ಠಾಪಿಸಬೇಕು. ಪರಿಶಿಷ್ಟರ ಬದುಕಿನ ನಿರ್ವಹಣೆಗೆ ಪ್ರತಿ ಕುಟುಂಬಕ್ಕೆ 5 ಎಕರೆ ಕೃಷಿ ಜಮೀನು ಮತ್ತು ಕೊಳವೆ ಬಾವಿಯನ್ನು ಸರ್ಕಾರ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್‌ಪಿ) ಕಾಯ್ದೆಯಡಿ ಪ್ರತಿ ವರ್ಷ ಬಜೆಟ್‌ನಲ್ಲಿ ಮೀಸಲಿಡುತ್ತಿರುವ ಹಣದಲ್ಲಿ ಮಾದಿಗ ಮತ್ತು ಸಂಬಂಧಿತ ಉಪ ಜಾತಿಗಳ ಅಭಿವೃದ್ಧಿಗೆ ನ್ಯಾಯೋಚಿತ ಪಾಲು ಒದಗಿಸಬೇಕು. ಮಾದಿಗ ಜನಾಂಗದ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಹಣವನ್ನು ಮೀಸಲಿಡಬೇಕು. ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರು, ಕುಲ ಸಚಿವರು, ಕುಲಪತಿಗಳ ಹುದ್ದೆಗಳಿಗೆ ಮಾದಿಗರನ್ನು ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.