ಬೆಂಗಳೂರು: ‘ಸೆನೆಗಲ್ನಿಂದ ಹಸ್ತಾಂತರಿಸುವ ಸಂದರ್ಭದಲ್ಲಿ ಸೆನೆಗಲ್ ನ್ಯಾಯಾಲಯ ನನ್ನ ವಿರುದ್ಧ ಉಲ್ಲೇಖಿಸಿರುವ ಪ್ರಕರಣಗಳಡಿ ಮಾತ್ರವೇ ನನ್ನನ್ನು ವಿಚಾರಣೆಗೆ ಒಳಪಡಿಸಿ ಶೀಘ್ರ ವಿಲೇವಾರಿ ಮಾಡಬೇಕು’ ಎಂದು ಕೋರಿ ಭೂಗತ ಪಾತಕಿ ರವಿ ಪೂಜಾರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ರವಿ ಪೂಜಾರಿ ಅಲಿಯಾಸ್ ರವಿಪ್ರಕಾಶ್ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠವು ಬುಧವಾರ ವಿಚಾರಣೆ ನಡೆಸಿತು.

‘ಹಸ್ತಾಂತರ ಆದೇಶದಲ್ಲಿ ಉಲ್ಲೇಖಿಸದೇ ಇರುವ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಬಹುದೇ ಎಂಬ ಬಗ್ಗೆ ಸ್ಪಷ್ಟನೆ ನೀಡಿ’ ಎಂದು ಪ್ರತಿವಾದಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?:

ನಗರದ 1ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಆರೋಪಿ ರವಿ ಪೂಜಾರಿಯವರನ್ನು ಸೆನೆಗಲ್ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ. ತಿಲಕ್ ನಗರ ಪೊಲೀಸ್ ಸ್ಟೇಷನ್ ಸೇರಿದಂತೆ ಇತರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಆಕ್ಷೇಪ ಏನು?:

‘ಹಸ್ತಾಂತರ ಆದೇಶದಲ್ಲಿ 37 ಪ್ರಕರಣಗಳ ವಿಚಾರಣೆಗೆ ಅರ್ಜಿದಾರರು ಬೇಕಾಗಿತ್ತು ಎಂದು ಹೇಳಲಾಗಿದೆ. ಆದರೆ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್ ಮತ್ತು ರಾಜಸ್ಥಾನದಲ್ಲಿ 107 ಪ್ರಕರಣಗಳ ವಿಚಾರಣೆ ನಡೆಸಲಾಗುತ್ತಿದೆ. ಇದು ಹಸ್ತಾಂತರ ಮಾಡಿರುವ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಲಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.