ಬೆಂಗಳೂರು: ಕರ್ನಾಟಕ ನೀರಾವರಿ ನಿಗಮದ ಆಡಳಿತ ಮಂಡಳಿ ಸದಸ್ಯ ಹಾಗೂ ನೀರಾವರಿ ತಜ್ಞ ಡಿ.ಎನ್.ದೇಸಾಯಿ (88) ಭಾನುವಾರ ಮಧ್ಯಾಹ್ನ ಬಸವೇಶ್ವರನಗರದ ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಹುದ್ದೆಗಳಲ್ಲಿ 30 ವರ್ಷಗಳಷ್ಟು ಕಾಲ ಕಾರ್ಯ ನಿರ್ವಹಿಸಿದ್ದರು.

ದೇಸಾಯಿ ಅವರು ರಾಜ್ಯದ ಕೃಷ್ಣಾ ಮತ್ತು ಮಹಾದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ರಚಿಸಿದ್ದ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯದ ನೀರಾವರಿ ಬೇಡಿಕೆಗಳನ್ನು ಕೇಂದ್ರದ ಮುಂದೆ ಸಮರ್ಥವಾಗಿ ಮಂಡಿಸುವಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ.

ಕಾವೇರಿ ಜಲ ವಿವಾದದಲ್ಲಿ ನ್ಯಾಯ

ಮಂಡಳಿ ಮುಂದೆ ತಜ್ಞ ಸಾಕ್ಷಿದಾರರಾಗಿ ಹಾಜರಾಗಿದ್ದರು. ಕೃಷ್ಣಾ ಜಲಭಾಗ್ಯ ನಿಗಮ, ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮಗಳ ಮಂಡಳಿ ನಿರ್ದೇಶಕರಾಗಿ ಹಾಗೂ ಈ ನಿಗಮಗಳ ತಾಂತ್ರಿಕ ಉಪಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 10.30 ಕ್ಕೆ ಚಾಮರಾಜಪೇಟೆ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.