ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಆಚರಿಸಲು ಸರ್ಕಾರ ಅನುಮತಿ ನೀಡಿದೆ.

ಸರ್ವೆ ನಂ. 40 ಗುಟ್ಟಹಳ್ಳಿ ಚಾಮರಾಜಪೇಟೆ ಮೈದಾನದಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ನಡೆಯಲಿದ್ದು, ಉಪವಿಭಾಗಾಧಿಕಾರಿ ಧ್ವಜಾರೋಹಣ ಮಾಡಬೇಕೆಂದು ಸೂಚಿಸಲಾಗಿದೆ ಎಂದರು.

‘ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಎರಡು ಸಂಘಟನೆಗಳು ಮನವಿ ಸಲ್ಲಿಸಿದ್ದವು. ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿತ್ತು’ ಎಂದು ನಗರ ಜಿಲ್ಲಾಧಿಕಾರಿ ದಯಾನಂದ ತಿಳಿಸಿದರು.

‘ಆಟದ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಜ.31ರಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವತಿಯಿಂದ ಸಂಸದ ಪಿ.ಸಿ. ಮೋಹನ್ ಅವರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದರು’ ಎಂದು ಒಕ್ಕೂಟದ ಶಶಾಂಕ್ ಹೇಳಿದರು.

ಮೈದಾನದ ಮಾಲೀಕತ್ವದ ಬಗ್ಗೆ ವಕ್ಫ್ ಹಾಗೂ ಬಿಬಿಎಂಪಿ ನಡುವೆ ಗೊಂದಲ ಉಂಟಾಗಿತ್ತು. ಹೈಕೋರ್ಟ್ ಕಂದಾಯ ಇಲಾಖೆಗೆ ಮಾಲೀಕತ್ವವನ್ನು ನೀಡಿತ್ತು. ನಂತರ, ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಈ ಮೈದಾನದಲ್ಲಿ ಆಚರಿಸಲಾಗಿತ್ತು. ನಂತರ ಗಣೇಶ ಉತ್ಸವಕ್ಕೆ ಅವಕಾಶ ನೀಡಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಯಾವುದೇ ಉತ್ಸವಕ್ಕೆ ಅವಕಾಶ ನೀಡಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.