ಬೆಂಗಳೂರು: ‘ಕೋವಿಡ್ ಮಾರ್ಗಸೂಚಿಯನ್ವವೇ ಗಣರಾಜ್ಯೋತ್ಸವ ನಡೆಯಲಿದ್ದು, ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಸಾರ್ವಜನಿಕರಿಗೂ ಪ್ರವೇಶ ಇರುವುದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದರು.

‘ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ಪಥಸಂಚಲನ, ರಾಜ್ಯಪಾಲರ ಭಾಷಣ ಇರಲಿದೆ’ ಎಂದರು.

‘ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ’ ಎಂದರು.

ಭದ್ರತೆ: ಭದ್ರತೆಗಾಗಿ 7 ಡಿಸಿಪಿ, 16 ಎಸಿಪಿ ಸೇರಿದಂತೆ 1,100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 16 ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಹಿತಿ ನೀಡಿದರು.

ಇದನ್ನೂ ಓದಿ... ಗಣರಾಜ್ಯೋತ್ಸವ ಸಮಾರಂಭ: ಪರೇಡ್ ವೀಕ್ಷಿಸಲು ಆಯ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.