ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದ ನಿವೃತ್ತ ಆರ್ಟಿಒ ನಂದೀಶ್ ಎಂಬುವರ ಬಳಿ ಜೀವಂತ ಗುಂಡುಗಳು ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಚೆನ್ನೈಗೆ ಹೋಗಲೆಂದು ನಂದೀಶ್ ಅವರು ನಿಲ್ದಾಣಕ್ಕೆ ಬಂದಿದ್ದರು. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ, ಅವರ ಬ್ಯಾಗ್ನಲ್ಲಿ ಪಿಸ್ತೂಲ್ ಹಾಗೂ 6 ಜೀವಂತ ಗುಂಡುಗಳು ಸಿಕ್ಕಿದ್ದವು’ ಎಂದು ಪೊಲೀಸ್ ಮೂಲಗಳು ಹೇಳಿವೆ.

’ನಂದೀಶ್ ಅವರನ್ನು ವಶಕ್ಕೆ ಪಡೆದ ಸಿಬ್ಬಂದಿ, ಠಾಣೆಗೆ ತಂದು ಒಪ್ಪಿಸಿದ್ದರು. ವಿಚಾರಣೆ ನಡೆಸಿದಾಗ, ಪಿಸ್ತೂಲ್ ಪರವಾನಗಿ ಇರುವುದಾಗಿ ನಂದೀಶ್ ಹೇಳಿದ್ದರು. ದಾಖಲೆಗಳ ಪರಿಶೀಲನೆ ನಡೆಸಿದಾಗ ಪರವಾನಗಿ ಇರುವುದು ಖಚಿತವಾಯಿತು. ಅವರಿಂದ ಹೇಳಿಕೆ ಪಡೆದು ವಾಪಸು ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.