ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವರು ಭೇಟಿ ನೀಡಿದ ವೇಳೆ, ಕೆಲ ಅಧಿಕಾರಿಗಳು ಕಚೇರಿಯಲ್ಲಿರಲಿಲ್ಲ. ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ತಾಲ್ಲೂಕು ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ತಹಶೀಲ್ದಾರ್, ವಿಶೇಷ ತಹಶೀಲ್ದಾರ್ ಸೇರಿದಂತೆ ಹಲವರು ಕರ್ತವ್ಯಕ್ಕೆ ಗೈರಾಗಿರುವುದು ಕಂಡು ಬಂತು. ಹಾಜರಾತಿ ದಾಖಲೆ ಪುಸ್ತಕದಲ್ಲಿ ತಮ್ಮ ಚಲನವಲನ ಬಗ್ಗೆ ಅಧಿಕಾರಿಗಳು ನಮೂದಿಸಬೇಕು. ಯಾವ ಕಾರಣಕ್ಕಾಗಿ ಹೊರಗೆ ಹೋಗುವುದಾಗಿ ನಮೂದಿಸಿಲ್ಲ’ ಎಂದರು.

‘ಸರ್ಕಾರಿ ಜಮೀನು ಒತ್ತುವರಿ ತೆರವು ವಿಚಾರದಲ್ಲಿ ನಿರ್ಲಕ್ಷ್ಯ, ಭೂ ದಾಖಲೆ ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಕೇಳಿಬಂದಿದೆ. ಗೈರಾಗಿರುವ ಅಧಿಕಾರಿಗಳು ಬಗ್ಗೆ ಹಾಗೂ ಅವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು’ ಎಂದು ಹೇಳಿದರು.

ದ್ವಿತೀಯ ದರ್ಜೆ ಸಹಾಯಕನ ಅಮಾನತು

ಬೆಂಗಳೂರು: ಬೆಂಗಳೂರು ಪೂರ್ವ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಭೇಟಿ ನೀಡಿದಾಗ ಕಚೇರಿಯಲ್ಲಿ ಇಲ್ಲದಿದ್ದರೂ ಕಚೇರಿಯಲ್ಲಿರುವುದಾಗಿ ತಿಳಿಸಿದ್ದ ದ್ವಿತೀಯ ದರ್ಜೆ ಸಹಾಯಕ ರಕ್ಷಿತ್ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲಿಸಿದಾಗ ರಕ್ಷಿತ್ ಸಹಿ ಮಾಡಿರಲಿಲ್ಲ. ಅವರಿಗೆ ಕರೆ ಮಾಡಿದರೆ ಕಚೇರಿಯಲ್ಲಿರುವುದಾಗಿ ಉತ್ತರಿಸಿದ್ದರು. ಇದನ್ನು ನಿರ್ಲಕ್ಷ್ಯ ಮತ್ತು ಅಸಭ್ಯ ವರ್ತನೆ ಎಂದು ಪರಿಗಣಿಸಿ ಜಿಲ್ಲಾಧಿಕಾರಿ ಜಗದೀಶ್ ಜಿ. ಅಮಾನತು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.