ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ–2025ರಂತೆ ಮತದಾರರ ಕರಡು ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದ್ದು, ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1.02 ಕೋಟಿ ಮತದಾರರಿದ್ದಾರೆ.

2024ರ ಜನವರಿ 22ರ ಅಂತಿಮ ಮತದಾರರ ಪಟ್ಟಿಯಂತೆ ನಗರದಲ್ಲಿ 98.43 ಲಕ್ಷ ಮತದಾರರಿದ್ದರು. ಏಪ್ರಿಲ್ನಲ್ಲಿ ನಡೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 1.01 ಕೋಟಿ ಮತದಾರರಿದ್ದರು.

ಮತದಾರರ ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಹಾಗೂ ಒಂದು ಭಾಗದ ಸಂಖ್ಯೆಯಿಂದ ಮತ್ತೊಂದು ಭಾಗದ ಸಂಖ್ಯೆಗೆ ವರ್ಗಾವಣೆಯಾಗಬೇಕಿದ್ದಲ್ಲಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 28ರವರೆಗೆ ಅವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಚುನಾವಣೆ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಮತದಾರರ ಕರಡು ಪಟ್ಟಿಯನ್ನು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ವೆಬ್ಸೈಟ್ www.ceokarnataka.kar.nic.in, ಬಿಬಿಎಂಪಿ ವೆಬ್ಸೈಟ್ www.bbmp.gov.in ಮತ್ತು Voter Helpline ಆ್ಯಪ್ ಅಥವಾ ವೆಬ್ ಪೋರ್ಟಲ್ Voters.eci.gov.inನಲ್ಲಿಯೂ ಮತದಾರರು ಕರಡು ಪಟ್ಟಿಯನ್ನು ಪರಿಶೀಲಿಸಬಹುದು ಎಂದು ಮಾಹಿತಿ ನೀಡಿದರು.

ವಿಶೇಷ ನೋಂದಣಿ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಿಗಾಗಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ನವೆಂಬರ್ 9, 10 ಹಾಗೂ 23, 24ರಂದು ಪಾಲಿಕೆಯ ಕಂದಾಯ ಅಧಿಕಾರಿಗಳು/ ಸಹಾಯಕ ಕಂದಾಯ ಅಧಿಕಾರಿಗಳು/ ವಾರ್ಡ್ ಕಚೇರಿಗಳು/ ಮತಗಟ್ಟೆಗಳಲ್ಲಿ ವಿಶೇಷ ಆಭಿಯಾನ ಆಯೋಜಿಸಲಾಗುತ್ತದೆ ಎಂದು ಸೆಲ್ವಮಣಿ ತಿಳಿಸಿದರು.

ಅಂತಿಮ ಪಟ್ಟಿ: ವಿಶೇಷ ಅಭಿಯಾನದ ನಂತರ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ 2025ರ ಜನವರಿ 1ರ ವೇಳೆಗೆ ಎಲ್ಲವನ್ನೂ ಪರಿಶೀಲನೆ ಮಾಡಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜನವರಿ 6ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಮನೆ ಮನೆಗೆ ಭೇಟಿ: ಮತದಾರರ ಕರಡು ಪಟ್ಟಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ರಾಜಕೀಯ ಪ್ರತಿನಿಧಿಗಳ ಜೊತೆ ಮಂಗಳವಾರ ಸಭೆ ನಡೆಸಿದರು.

28 ವಿಧಾನಸಭಾ ಕ್ಷೇತ್ರವಾರು ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡಿ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಏಜೆಂಟ್ (ಬಿಎಲ್ಎ) ಅವರೊಂದಿಗೆ ಸಮನ್ವಯ ಸಾಧಿಸಿ, ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.