ಬೆಂಗಳೂರು: ಕೋರಮಂಗಲದ ಬ್ಯಾಂಕೊಂದರಲ್ಲಿ ನಡೆದಿದ್ದ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಜೊತೆ ಬ್ಯಾಂಕ್ಗೆ ಬಂದಿದ್ದ ಬಬ್ಲಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪತ್ನಿ ಕೈಗೂ ಮಾರಕಾಸ್ತ್ರದಿಂದ ಹೊಡೆಯಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಆರೋಪಿಗಳಾದ ಪ್ರದೀಪ್ ಅಲಿಯಾಸ್ ಚೋಟೆ ಹಾಗೂ ರವಿ ಬುಧವಾರ ನಸುಕಿನಲ್ಲಿ ಬೇಗೂರು ಕೆರೆ ಬಳಿ ಕಾಣಿಸಿಕೊಂಡಿದ್ದರು. ಪೊಲೀಸರ ತಂಡ ಸ್ಥಳಕ್ಕೆ ಹೋಗಿ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದತ್ತು. ಅದೇ ಸಂದರ್ಭದಲ್ಲಿ ಆರೋಪಿಗಳು, ಪಿಎಸ್ಐ ಹಾಗೂ ಎಎಸ್ಐ ಮೇಲೆ ಹಲ್ಲೆ ಮಾಡಿದ್ದರು. ರಕ್ಷಣೆಗೆ ಹೋದ ಇನ್ಸ್ಪೆಕ್ಟರ್, ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

‘ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವಿಚಾರಣೆ ನಡೆಸಬೇಕಿದೆ. ಅವಾಗಲೇ ಬಬ್ಲಿ ಕೊಲೆಗೆ ನಿಖರ ಕಾರಣ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು.

‘ಗಾಯಗೊಂಡಿರುವ ಪಿಎಸ್ಐ ಹಾಗೂ ಎಎಸ್ಐ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ತಿಳಿಸಿದರು.

ಇದನ್ನೂ ಓದಿ... ಚೀನಾದಲ್ಲಿ ಭಾರಿ ಮಳೆ: ಮೆಟ್ರೊ ಸುರಂಗ ಮಾರ್ಗಕ್ಕೆ ನುಗ್ಗಿದ ನೀರು, 12 ಮಂದಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.