ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಹಾಗೂ ಇತರೆ ರೌಡಿಶೀಟರ್ಗಳಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ ನಾಗರಾಜ್ ಸೇರಿದಂತೆ 20 ವಿಚಾರಣಾಧೀನ ಕೈದಿಗಳನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭಾನುವಾರ ಸ್ಥಳಾಂತರಿಸಲಾಗಿದೆ. ಬಿಗಿ ಭದ್ರತೆ ಮಧ್ಯೆ ಕೈದಿಗಳನ್ನು ಕರೆದೊಯ್ಯಲಾಯಿತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರು ಒಂದು ಕೈನಲ್ಲಿ ಕಾಫಿ ಕಪ್, ಮತ್ತೊಂದು ಕೈನಲ್ಲಿ ಸಿಗರೇಟ್ ಹಿಡಿದುಕೊಂಡಿದ್ದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ಫೋಟೊದಲ್ಲಿ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನಾ, ದರ್ಶನ್, ದರ್ಶನ್ ವ್ಯವಸ್ಥಾಪಕ ನಾಗರಾಜ ಕಾಣಿಸಿಕೊಂಡಿದ್ದರು. ವಿಶೇಷ ಆತಿಥ್ಯ ನೀಡಿದ್ದ ಪ್ರಕರಣದಲ್ಲಿ ಮೂರು ಎಫ್ಐಆರ್ಗಳು ದಾಖಲಾಗಿದ್ದವು. ಅದಾದ ಮೇಲೆ, ನ್ಯಾಯಾಲಯದ ಅನುಮತಿ ಪಡೆದು ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಈಗ ನಾಗನನ್ನು ಸ್ಥಳಾಂತರ ಮಾಡಲಾಗಿದೆ.
.ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನ ವಿಸ್ತರಣೆ.
ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ದರ್ಶನ್ ಅವರ ಪರ ವಕೀಲರು, ಶನಿವಾರ ಜಾಮೀನು ಕೋರಿ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಂದು ನ್ಯಾಯಾಧೀಶರು ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿ ಮಾಡಿ ಸೆ.23ಕ್ಕೆ ವಿಚಾರಣೆ ಮುಂದೂಡಿದ್ದರು.
.ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ನಟ ದರ್ಶನ್ ಅರ್ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.