ಬೆಂಗಳೂರು: ಮೊಬೈಲ್‌ನಲ್ಲಿ ಆ್ಯಪ್ ಇನ್‌ಸ್ಟಾಲ್ ಮಾಡಿಸಿ ಬ್ಯಾಂಕ್ ಖಾತೆಯಲ್ಲಿದ್ದ ₹ 14.16 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದ್ದು, ಈ ಸಂಬಂಧ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

‘ನಗರದ 57 ವರ್ಷ ವಯಸ್ಸಿನ ಪುರುಷ ಹಾಗೂ 31 ವರ್ಷ ವಯಸ್ಸಿನ ಮಹಿಳೆಯ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ಇಬ್ಬರೂ ದೂರು ನೀಡಿದ್ದು, ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪಾನ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ನವೀಕರಣ ಹೆಸರಿನಲ್ಲಿ ಆರೋಪಿಗಳು, ದೂರುದಾರರಿಗೆ ಸಂದೇಶ ಕಳುಹಿಸಿದ್ದರು. ಅದನ್ನು ನಂಬಿದ್ದ ದೂರುದಾರರು, ಸಂದೇಶಕ್ಕೆ ಪ್ರತಿಕ್ರಿಯೆ ನೀಡಿದ್ದರು.’

‘ನಿಮ್ಮ ಪಾನ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ನವೀಕರಣ ಮಾಡಿಸಬೇಕು. ಇಲ್ಲದಿದ್ದರೆ, ಬ್ಯಾಂಕ್ ಖಾತೆ ನಿಷ್ಕ್ರಿಯವಾಗುತ್ತದೆ. ಖಾತೆಯಲ್ಲಿರುವ ಹಣ ಸಹ ಸಿಗುವುದಿಲ್ಲ’ ಎಂದಿದ್ದರು. ಹೆದರಿದ್ದ ದೂರುದಾರರು, ನವೀಕರಣ ಮಾಡಿಕೊಳ್ಳಲು ಒಪ್ಪಿದ್ದರು. ಅವಾಗಲೇ ಆರೋಪಿಗಳು, ವಾಟ್ಸ್‌ಆ್ಯಪ್‌ನಲ್ಲಿ ಆ್ಯಪ್‌ವೊಂದರ ಎಪಿಕೆ (ಆ್ಯಡ್ರಾಯ್ಡ್ ಅಪ್ಲಿಕೇಷನ್ ಪ್ಯಾಕೇಜಸ್) ಫೈಲ್ ಕಳುಹಿಸಿದ್ದರು. ಅದನ್ನು ದೂರುದಾರರು, ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡಿದ್ದರು. ಇದಾದ ನಂತರ ದೂರುದಾರರ ಖಾತೆಯಿಂದ ಹಣ ಕಡಿತವಾಗಿದೆ’ ಎಂದು ತಿಳಿಸಿದರು.

ಆ್ಯಪ್ ಬಗ್ಗೆ ಎಚ್ಚರ: ‘ಸೈಬರ್ ವಂಚಕರು ನಾನಾ ಕಾರಣ ಹೇಳಿ ಆ್ಯಪ್‌ವೊಂದರ ಎಪಿಕೆ ಕಳುಹಿಸಿ ವಂಚನೆ ಮಾಡುತ್ತಿದ್ದಾರೆ. ಜನರು ಹೆಚ್ಚು ಜಾಗೃತಿ ವಹಿಸಬೇಕು’ ಎಂದು ಸೈಬರ್ ಕ್ರೈಂ ಠಾಣೆ ಪೊಲೀಸರು ಹೇಳಿದರು.

‘ಕೆನರಾ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‌ಗಳ ಹೆಸರಿನಲ್ಲಿ ಸಂದೇಶಗಳು ಬರುತ್ತಿವೆ. ಇಂಥ ಸಂದೇಶಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಅನುಮಾನಾಸ್ಪದ ಸಂದೇಶಗಳ ಬಗ್ಗೆ ಠಾಣೆಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.