ಬೆಳಗಾವಿ: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ₹8,038 ಕೋಟಿ ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಕಾರ್ಯಕ್ರಮಕ್ಕೆ ’ಮುಖ್ಯಮಂತ್ರಿ ನವ ಬೆಂಗಳೂರು ಯೋಜನೆ‘ ಎಂದೂ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಈ ಮೊತ್ತವನ್ನು ವೈಟ್ ಟಾಪಿಂಗ್, ಮೇಲ್ಸೇತುವೆಗಳ ನಿರ್ಮಾಣ ಹಾಗೂ ಕಾರಿಡಾರ್ಗಳ ನಿರ್ಮಾಣ ಸೇರಿದಂತೆ 14 ಪ್ರಮುಖ ಯೋಜನೆಗಳಿಗೆ ಬಳಸಲಾಗುತ್ತದೆ. ವೈಟ್ ಟಾಪಿಂಗ್ಗೆ ₹1,260 ಕೋಟಿ ನೀಡಲು ತೀರ್ಮಾನಿಸಲಾಗಿದೆ.

ಬೆಳ್ಳಂದೂರು ಕೆರೆಯ ಅಭಿವೃದ್ಧಿಗೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ದಂಡ ವಿಧಿಸಿತ್ತು. ಇದೀಗ, ಕೆರೆಗಳ ಅಭಿವೃದ್ಧಿಗೆ ₹360 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯು ₹9 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳ ಪ್ರಸ್ತಾವ ಸಲ್ಲಿಸಿತ್ತು. ಅದರಲ್ಲಿ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ಕೇಳಿದ್ದ ₹962.63 ಕೋಟಿ ಅನುದಾನ ಪ್ರಸ್ತಾವ ಹೊರತುಪಡಿಸಿ ಉಳಿದೆಲ್ಲ ಬೇಡಿಕೆಗಳಿಗೆ ಸರ್ಕಾರ ಅಸ್ತು ಎಂದಿದೆ.

ಬೆಂಗಳೂರಿನ ಅಭಿವೃದ್ಧಿಗೆ ₹2,500 ಕೋಟಿ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಬಜೆಟ್ನಲ್ಲಿ ಪ್ರಕಟಿಸಿದ್ದರು.

ಬೆಂಗಳೂರಿನಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ₹25 ಸಾವಿರ ಕೋಟಿ ನೀಡಲು ಮುಖ್ಯಮಂತ್ರಿ ನೇತೃತ್ವದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಇತ್ತೀಚೆಗೆ ತೀರ್ಮಾನಿಸಲಾಗಿತ್ತು. ಈ ಕಾಮಗಾರಿಯನ್ನು ಜನವರಿಯಲ್ಲಿ ಆರಂಭಿಸುವುದಾಗಿ ಪ್ರಕಟಿಸಲಾಗಿತ್ತು. ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಪಿಆರ್ಆರ್ ಯೋಜನೆಯ ಭೂಸ್ವಾಧೀನಕ್ಕೆ ₹4,500 ಕೋಟಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರ ಬೆನ್ನಲ್ಲೇ, ಬೆಂಗಳೂರಿನ ಅಭಿವೃದ್ಧಿಗೆ ಮತ್ತೊಂದು ಕೊಡುಗೆಯನ್ನು ಮೈತ್ರಿ ಸರ್ಕಾರ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.