ಬೆಂಗಳೂರು: ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಜನರನ್ನು ಕೊಂಡೊಯ್ಯುತ್ತಿದ್ದ 113 ಸರಕು ಸಾಗಣೆ ವಾಹನಗಳ ನೋಂದಣಿ ಪ್ರಮಾಣ ಪತ್ರವನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ರದ್ದುಪಡಿಸಿದ್ದಾರೆ.

ಕಾನೂನು ಬಾಹಿರವಾಗಿ ಸಂಚರಿಸುತ್ತಿದ್ದ ಸರಕು ಸಾಗಣೆ ವಾಹನಗಳ ವಿರುದ್ಧ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿದ ಆರ್ಟಿಒಗಳು, 15,900 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸಾರಿಗೆ ನಿಯಮ ಉಲ್ಲಂಘಿಸಿದ್ದ 558 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 125 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

‘ನಿಯಮ ಉಲ್ಲಂಘಿಸಿದ್ದ ವಾಹನಗಳ ಮಾಲೀಕರಿಂದ ₹ 1.20 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ, 158 ವಾಹನಗಳ ರಹದಾರಿ ಪತ್ರಗಳನ್ನೂ ಅಮಾನತುಪಡಿಸಿಕೊಳ್ಳಲಾಗಿದೆ’ ಎಂದು ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಜೆ. ಜ್ಞಾನೇಂದ್ರಕುಮಾರ್ ತಿಳಿಸಿದರು.

‘ಹೈಕೋರ್ಟ್ ನಿರ್ದೇಶನದಂತೆ ಜೂನ್ನಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಆಟೊ, ಮ್ಯಾಕ್ಸಿ ಕ್ಯಾಬ್, ಮಾರುತಿ ವ್ಯಾನ್ ಹಾಗೂ ಸರಕು ಸಾಗಣೆ ವಾಹನಗಳೆಲ್ಲವನ್ನೂ ತಪಾಸಣೆಗೆ ಒಳಪಡಿಸಲಾಯಿತು. ಇನ್ನು ಮುಂದೆಯೂ ತಪಾಸಣೆ ಮುಂದುವರಿಯಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.