ಬೆಂಗಳೂರು: ಎಸ್.ಬಂಗಾರಪ್ಪ ವಿಚಾರ ವೇದಿಕೆ ನೀಡುವ 2024ನೇ ಸಾಲಿನ ‘ಸೇವಾ ಬಂಗಾರ ಪ್ರಶಸ್ತಿ’ಗೆ ಸುಮಂಗಲಿ ಸೇವಾಶ್ರಮದ ಎಚ್.ಜಿ. ಸುಶೀಲಮ್ಮ, ‘ಸಾಹಿತ್ಯ ಬಂಗಾರ ಪ್ರಶಸ್ತಿ’ಗೆ ಸಾಹಿತಿ ಕುಂ. ವೀರಭದ್ರಪ್ಪ ಹಾಗೂ ‘ಕಲಾ ಬಂಗಾರ ಪ್ರಶಸ್ತಿ’ಗೆ ಕಲಾವಿದೆ ಪ್ರತಿಭಾ ನಾರಾಯಣ್ ಆಯ್ಕೆಯಾಗಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ, ‘ಪ್ರಶಸ್ತಿಯು ತಲಾ ₹1 ಲಕ್ಷ ನಗದು, ತಾಮ್ರ ಫಲಕ ಒಳಗೊಂಡಿದೆ’ ಎಂದರು.

ಎಸ್. ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಬಂಗಾರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ಅಕ್ಟೋಬರ್ 26ರಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ‘ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಜನ್ಮ ದಿನಾಚರಣೆ, ವಿಚಾರಸಂಕಿರಣ ಹಾಗೂ ಅಭಿನಂದನಾ ಕಾರ್ಯಕ್ರಮ’ದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರಶಸ್ತಿ ಪ್ರದಾನ ಮಾಡುವರು. ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವೇದಿಕೆಯ ಅಧ್ಯಕ್ಷ ವೇಣುಗೋಪಾಲ ನಾಯ್ಕ, ಶಮಂತ್ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.