ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಕಳಪೆ ಗುಟ್ಟಮಟ್ಟದ ಶೂ, ಟೀ ಶರ್ಟ್ ಹಾಗೂ ಬೆಲ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ₹23.90 ಲಕ್ಷದ ಕಳಪೆ ಸಾಮಗ್ರಿ ಜಪ್ತಿ ಮಾಡಿಕೊಂಡಿದ್ದಾರೆ.

ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಯಾಂಚುರಿ ಹಾಗೂ ಶ್ರೀಸಾಯಿ ಕಲೆಕ್ಷನ್ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

‘ಕಂಪನಿ ವ್ಯವಸ್ಥಾಕರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಲಾಗಿತ್ತು. ಶೂ, ಬೆಲ್ಟ್ ಹಾಗೂ ಟೀ ಶರ್ಟ್‌ಗಳನ್ನು ದಾಸ್ತಾನು ಮಾಡಿಕೊಂಡು ಅವುಗಳಿಗೆ ಪ್ರತಿಷ್ಠಿತ ಕಂಪನಿ ಸ್ಟಿಕರ್ ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು. ಕಳಪೆ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.