ಕೆ.ಆರ್.ಪುರ: ‘ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನವನ್ನು ಡಿಸೆಂಬರ್ 28 ಮತ್ತು 29ರಂದು
ಬಾಗಲೂರು ವಿಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಅವರು ತಿಳಿಸಿದರು.

ನಾಗವಾರದ ಎಸ್.ವಿ.ಎನ್ ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಾಗೂ ಬೆಂಗಳೂರು ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಸಮ್ಮೇಳನ ನಡೆಯಲಿದೆ ಎಂದು ಹೇಳಿದರು.

ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದ್ದು, ವಿಜ್ಞಾನ ವಸ್ತು ಪ್ರದರ್ಶನ, ಆಹಾರಮೇಳ, ಕರಕುಶಲ ವಸ್ತು ಪ್ರದರ್ಶನ, ಆಕರ್ಷಕ ಸಾಂಸ್ಕೃತಿಕ ವೈಭವ, ರಾಜ್ಯ ಮಟ್ಟದ 10 ಜನರಿಗೆ ಜೀವಮಾನ ಶ್ರೇಷ್ಠ ಸಾಧನ ಪ್ರಶಸ್ತಿ, ರಾಜ್ಯದ 37 ಜನರಿಗೆ ಹೆಚ್.ಎನ್.ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

ಸಮ್ಮೇಳನದಲ್ಲಿ ರಾಜ್ಯದ 30 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು. ಬುದ್ಧನ ಬೆಳಕು ಹಾಗೂ ಕೆಂಪೇಗೌಡ ನಾಟಕ ಪ್ರದರ್ಶನವಾಗಲಿವೆ. ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.