ಬೆಂಗಳೂರು: ಆಧ್ಯಾತ್ಮಿಕ ಚಿಂತಕ ಹಾಗೂ ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ (82) ಅವರು ಬುಧವಾರ ನಿಧನರಾದರು.ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಅವರಿಗೆಪತ್ನಿ ಹಾಗೂ ಪುತ್ರ ಇದ್ದಾರೆ. ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರಾದ ವೇಲಣಕರ್ ಅವರು, ಹರಿಕಥಾ ವಿದ್ವಾಂಸ ಸಂತ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸ ಅವರ ಶಿಷ್ಯರಾಗಿದ್ದರು. ಹರಿಕಥಾ ಪರಂಪರೆಗೆ ಮಹತ್ತರ ಕೊಡುಗೆ ನೀಡಿದ ಅವರು,ಗೋರಖ್ಪುರದ ಗೀತಾ ಪ್ರೆಸ್ನ ನೂರಕ್ಕೂ ಅಧಿಕ ಆಧ್ಯಾತ್ಮಿಕ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.

ಷಡ್ಜ ಕಲಾ ಕೇಂದ್ರವನ್ನು ಸ್ಥಾಪಿಸಿ, ಆಧ್ಯಾತ್ಮಿಕ, ಸಂಗೀತ ಹಾಗೂ ಸಾಹಿತ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.