ಬೆಂಗಳೂರು: ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿದಲ್ಲಿ ಮಾತ್ರ ಅನ್ಯ ರಾಜ್ಯದವರಿಗೆ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗಿದ್ದು, ಮಹಾರಾಷ್ಟ್ರದಿಂದ ಬಂದವರು ಕಡ್ಡಾಯವಾಗಿ 7 ದಿನಗಳು ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಬೇಕಾಗುತ್ತದೆ.

ಸೋಮವಾರದಿಂದ (ಜೂ.1) ನಿರ್ಬಂಧವನ್ನು ಇನ್ನಷ್ಟು ಸಡಿಲ ಮಾಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು ಅನ್ಯ ರಾಜ್ಯಗಳಿಂದ ಬರುವವರು ಅನುಸರಿಸಬೇಕಾದ ನಿಯಮಗಳನ್ನೊಳಗೊಂಡ 4 ಪುಟಗಳ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ರಾಜ್ಯಕ್ಕೆ ಬರುವ ಮೊದಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ವಿವರ ಹಾಗೂ ಪ್ರಯಾಣದ ಮಾಹಿತಿ ನಮೂದಿಸಬೇಕು. ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿಯೇ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ಸೋಂಕು ಲಕ್ಷಣಗಳು ಇದ್ದಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಇಲ್ಲವಾದಲ್ಲಿ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಬಹುದಾಗಿದೆ. ವ್ಯಾಪಾರ ವ್ಯವಹಾರದ ಸಂಬಂಧ ಭೇಟಿ ನೀಡುವವರು ಹೋಂ ಕ್ವಾರಂಟೈನ್ಗೆ ಒಳಪಡಬೇಕಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.