ಬೆಂಗಳೂರು: ರಾಜಾಜಿನಗರದ ಲುಲ್ ಶಾಪಿಂಗ್ ಮಾಲ್ನಲ್ಲಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ವತ್ಥನಾರಾಯಣ (63) ಅವರು ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾರೆ.

ಅ. 29ರಂದು ಲುಲು ಮಾಲ್ನಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಮಾಗಡಿ ರಸ್ತೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

‘ನಿವೃತ್ತ ಶಿಕ್ಷಕ ಅಶ್ವತ್ಥನಾರಾಯಣ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ವಿಳಾಸ ಪತ್ತೆ ಮಾಡಿ ನೋಟಿಸ್ ನೀಡಿದರೂ ಆರೋಪಿ ವಿಚಾರಣೆಗೆ ಬಂದಿರಲಿಲ್ಲ. ಗುರುವಾರ ಮಧ್ಯಾಹ್ನ ವಕೀಲರ ಸಮೇತ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಶರಣಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿ ಪರ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿ ಪುರಸ್ಕರಿಸಿರುವ ನ್ಯಾಯಾಲಯ, ಆರೋಪಿಗೆ ಜಾಮೀನು ನೀಡಿದೆ. ಸದ್ಯ ಆರೋಪಿ ಮನೆಗೆ ಹೋಗಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.