ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ಹೊರಟಿದ್ದ ಬಾಲಕಿಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ಟಿ. ಕಾಂತರಾಜ್ ಎಂಬಾತನಿಗೆ 3 ವರ್ಷಗಳ ಶಿಕ್ಷೆ ವಿಧಿಸಿ ನಗರದ ತ್ವರಿತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಚಿಕ್ಕಲಸಂದ್ರದ ನಿವಾಸಿ ಕಾಂತರಾಜ್ ವಿರುದ್ಧ ಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಕೆ.ಎನ್. ರೂಪಾ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

‘2019ರ ಆಗಸ್ಟ್ 14ರಂದು ಬಾಲಕಿಯು ತನ್ನ ತಾಯಿ ಜೊತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದು ಕೊಂಡು ಹೊರಟಿದ್ದಳು. ಅದೇ ಜಾಗದಲ್ಲಿದ್ದ ಆರೋಪಿ, ಪಾದಚಾರಿ ಸೋಗಿನಲ್ಲಿ ಬಾಲಕಿಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆಯೊಡ್ಡಿದ್ದ. ನೊಂದ ಬಾಲಕಿ ಪೋಷಕರ ಸಮೇತ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.