ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ಶಾಂತವೇರಿ ಗೋಪಾಲಗೌಡ ಸಂಸ್ಕೃತಿ’ ಪ್ರಶಸ್ತಿಗೆ ಆಳಂದ ಶಾಸಕ ಹಾಗೂ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ, ಪ್ರಶಸ್ತಿ ಪತ್ರ ಹಾಗೂ ಕಂಚಿನ ಫಲಕ ಒಳಗೊಂಡಿದೆ.

ಮಾರ್ಚ್ 14ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಿ.ಚಿ. ಬೋರಲಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಮರ್ಶಕ ನಟರಾಜ ಹುಳಿಯಾರ್, ವಕೀಲ ಕೆ. ದಿವಾಕರ್, ಶಾಂತವೇರಿ ಗೋಪಾಲಗೌಡ ಪ್ರತಿಷ್ಠಾನದ ಕಾರ್ಯದರ್ಶಿ ರಾಮಮನೋಹರ ಅವರು ಭಾಗವಹಿಸಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.