ಬೆಂಗಳೂರು:ಸಿದ್ದಾಪುರ ಠಾಣೆ ವ್ಯಾಪ್ತಿಯ ಸೋಮೇಶ್ವರ ನಗರದಲ್ಲಿ ಕಾಂಗ್ರೆಸ್ ಮುಖಂಡ ಸೈಯದ್ ರಿಯಾಜ್ (37) ಎಂಬುವರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

‘ಸೋಮವಾರ ಮಧ್ಯಾಹ್ನ 3.50ರ ಸುಮಾರಿಗೆ ಈ ಘಟನೆ ನಡೆದಿದೆ. ತೀವ್ರ ಗಾಯಗೊಂಡಿರುವ ರಿಯಾಜ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಸರ್ಕಾರೇತರ ಸಂಸ್ಥೆಯೊಂದನ್ನು ನಡೆಸುತ್ತಿದ್ದ ರಿಯಾಜ್ ಮನೆಗೆ ಬೈಕ್ನಲ್ಲಿ ಊಟಕ್ಕೆಂದು ಹೋಗಿದ್ದರು. ಮನೆ ಮುಂದೆ ಬೈಕ್ ನಿಲ್ಲಿಸುತ್ತಿದ್ದಂತೆ, ಎರಡು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಸುತ್ತುವರಿದು ತಲೆಗೆ ಹೊಡೆದರು. ಕಿರುಚಾಟ ಕೇಳಿ ಸ್ಥಳೀಯರು ಸಹಾಯಕ್ಕೆ ಬರುವಷ್ಟರಲ್ಲೇ ಆರೋಪಿಗಳು ಪರಾರಿಯಾದರು.’

‘ಆರೋಪಿಗಳು ಹೆಲ್ಮೆಟ್ ಧರಿಸಿಕೊಂಡು ಬಂದು ಕೃತ್ಯ ಎಸಗಿದ್ದಾರೆ. ರಿಯಾಜ್ ಹೇಳಿಕೆ ಆಧರಿಸಿ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.