ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ: ಟೌನ್‌ಶಿಪ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ದೊಡ್ಡಬಳ್ಳಾಪುರ, ದೊಡ್ಡಬೆಳವಂಗಲಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ
Published 12 ಜೂನ್ 2024, 16:34 IST
Last Updated 12 ಜೂನ್ 2024, 16:34 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತ ಟೌನ್‌ಶಿಪ್‌ ಅಭಿವೃದ್ಧಿಪಡಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ವಸತಿ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ರಾಜಧಾನಿಯ ಸುತ್ತಲಿನ ತಾಲ್ಲೂಕುಗಳಲ್ಲಿ ಹೈಟೆಕ್‌ ಸೌಲಭ್ಯ ಒಳಗೊಂಡ ಟೌನ್‌ಶಿಪ್‌ ನಿರ್ಮಿಸುವ ಸರ್ಕಾರದ ಯೋಜನೆ ಭಾಗವಾಗಿ ಕಸಬಾ ಹೋಬಳಿಯ ರಾಜಘಟ್ಟ, ತಿಮ್ಮಸಂದ್ರ, ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ ಸಮೀಪ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದು ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರದಲ್ಲಿ ಬೆಂಗಳೂರು ಸುತ್ತಲಿನ ತಾಲ್ಲೂಕುಗಳಲ್ಲಿ ಹಾಯ್ದು ಹೋಗುವಂತೆ ರಿಂಗ್‌ ರಸ್ತೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲಾಗಿತ್ತು. ಈ ರಿಂಗ್‌ ರಸ್ತೆ ರಾಮನಗರ ಜಿಲ್ಲೆಯ ಸಾತನೂರು ಸಮೀಪದಿಂದ ಪ್ರಾರಂಭವಾಗಿ ಬಿಡದಿ, ಮಾಗಡಿ, ಸೋಲೂರು, ದಾಬಸ್‌ಪೇಟೆ, ದೊಡ್ಡಬಳ್ಳಾಪುರ,ದೇವನಹಳ್ಳಿ, ನಂದಗುಡಿ, ಆನೇಕಲ್‌ ತಾಲ್ಲೂಕಿನ ಮೂಲಕ ಮತ್ತೆ ಸಾತನೂರು ಸೇರುತ್ತದೆ. 

ರಿಂಗ್‌ ರಸ್ತೆ ನಿರ್ಮಾಣದಿಂದ ಅಂತರ ರಾಜ್ಯಗಳ ಹೆದ್ದಾರಿ, ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಬಹುದಾಗಿದೆ. ನೂತನ ಟೌನ್‌ಶಿಪ್‌ಗಳನ್ನು ಸಹ ಈ ರಿಂಗ್‌ ರಸ್ತೆ ಸಮೀಪದಲ್ಲೇ ನಿರ್ಮಿಸುವ ಉದ್ದೇಶದೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಯಾವುದನ್ನೂ ಅಂತಿಮಗೊಳಿಸಿಲ್ಲ. ಟೌನ್‌ಶಿಪ್‌ ನಿರ್ಮಾಣದ ಸಾಧ್ಯತೆ, ಅನುಕೂಲಗಳ ಕುರಿತಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT