ಬೆಂಗಳೂರು: ‘ಮಹಾತ್ಮ ಗಾಂಧಿ–ಕಸ್ತೂರ ಬಾ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಇದೇ 14 ಮತ್ತು 15ರಂದು ನಗರದ ಗಾಂಧಿಭವನದಲ್ಲಿ ಪರ್ಯಾಯ ವ್ಯವಸ್ಥೆಗಾಗಿ ರಾಷ್ಟ್ರಮಟ್ಟದ ಸಮಾಜವಾದಿ ಸಮಾಗಮ’ ಕಾರ್ಯ ಕ್ರಮ ಏರ್ಪಡಿಸಲಾಗಿದೆ’ ಎಂದು ಹಿರಿಯ ರಾಜಕಾರಣಿ ಬಿ.ಆರ್.ಪಾಟೀಲ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಮೈಕಲ್ ಬಿ.ಫರ್ನಾಂಡಿಸ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮ
ವನ್ನುಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು)ಪ್ರಾಧ್ಯಾಪಕ ಆನಂದ ಕುಮಾರ್ ಉದ್ಘಾಟಿಸಲಿದ್ದಾರೆ.ರೈತ ನಾಯಕ ಕೆ.ಟಿ.ಗಂಗಾಧರ್, ಸಮಾಜವಾದಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಬಳಿಕವಿಷಯವಾರು ಗೋಷ್ಠಿಗಳು ನಡೆಯಲಿವೆ’ ಎಂದು ತಿಳಿಸಿದರು.

‘ಡಿ.15ರಂದು ಬೆಳಿಗ್ಗೆ 9.30ಕ್ಕೆ ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ಅವರು ‘ಸಮಾಜವಾದಿ ದೃಷ್ಟಿಕೋನದಿಂದ ಪ್ರಸಕ್ತ ಸನ್ನಿವೇಶದ ವಿಶ್ಲೇಷಣೆ ಮತ್ತು ಪರಿಹಾರ’ ಕುರಿತು ಚರ್ಚಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ರೈತ ಪರ ಹಾಗೂ ದಲಿತ ಪರ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದೇಶದ ಆಯ್ದ 300 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆರ್ಥಿಕ ಹಿಂಜರಿತ, ನಿರುದ್ಯೋಗ, ಕೃಷಿ ಬಿಕ್ಕಟ್ಟು ಹಾಗೂ ಸಂವಿಧಾನ ವಿರೋಧಿ ವಿಷಯಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ,ಲೇಖಕಿ ಬಿ.ಟಿ.ಲಲಿತಾ ನಾಯಕ್,ಮೈಕಲ್ ಬಿ.ಫರ್ನಾಂಡಿಸ್, ರೈತ ನಾಯಕರಾದ ಅನಸೂಯಮ್ಮ ಹಾಗೂ ಜೆ.ಎಂ.ವೀರಸಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.