ಬೆಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕವು, ‘ಪ್ರವಾದಿ ಮಹಮ್ಮದ್ ಮಹಾನ್ ಚಾರಿತ್ರ್ಯವಂತ’ ಎಂಬ ಧ್ಯೇಯ ವಾಕ್ಯದಡಿ ಇದೇ ಶುಕ್ರವಾರದಿಂದ (ಸೆಪ್ಟೆಂಬರ್) 22ರವರೆಗೆ ರಾಜ್ಯದಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಂಡಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಘಟಕದ ಕಾರ್ಯದರ್ಶಿ ಮೌಲಾನಾ ವಹೀದುದ್ದೀನ್ ಖಾನ್ ಉಮರಿ, ‘ಸಮಾಜದಲ್ಲಿರುವ ಪರಸ್ಪರ ಅಪನಂಬಿಕೆ, ದ್ವೇಷ, ಪೂರ್ವಗ್ರಹಗಳನ್ನು ಹೋಗಲಾಡಿಸಿ, ಶಾಂತಿ, ಸೌಹಾರ್ದ ಮತ್ತು ಮಾನವೀಯತೆಯನ್ನು ಬೆಳೆಸುವುದು ಈ ಅಭಿಯಾನದ ಉದ್ದೇಶವಾಗಿದೆ. ಪ್ರವಾದಿ ಮಹಮ್ಮದ್ ಅವರ ವ್ಯಕ್ತಿತ್ವ, ಸಂದೇಶ ಮತ್ತು ಬೋಧನೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಇವುಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ’ ಎಂದು ವಿವರಿಸಿದರು.

‘ಪ್ರವಾದಿ ಮಹಮ್ಮದ್ ಅವರ ಬಗ್ಗೆ ಜಗತ್ತಿನ ಪ್ರಸಿದ್ಧ ದಾರ್ಶನಿಕರ ಅನಿಸಿಕೆಗಳು ಮತ್ತು ದೇಶದ ಹೆಸರಾಂತ ಬುದ್ಧಿಜೀವಿಗಳು ಬರೆದಿರುವ ಲೇಖನ ಸಂಕಲನದ ಪುಸ್ತಕಗಳನ್ನು ಹೊರತರಲಾಗುವುದು. ರಾಜ್ಯದಾದ್ಯಂತ ಸಮ್ಮೇಳನಗಳು, ವಿಚಾರಗೋಷ್ಠಿಗಳು, ಸಂವಾದ ಕಾರ್ಯಕ್ರಗಳು, ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಭಿಯಾನದ ಪೋಸ್ಟರ್ ಮತ್ತು ಪ್ರವಾದಿ ಮಹಮ್ಮದ್ ಅವರ ಕುರಿತು ಶಾಂತಿ ಪ್ರಕಾಶನ ಹೊರತಂದಿರುವ ‘ಪ್ರವಾದಿ ಮುಹಮ್ಮದ್- ಲೇಖನಗಳ ಸಂಕಲನ’ ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಘಟಕದ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ, ಮುಹಮ್ಮದ್ ನವಾಝ್, ಮುಹಮ್ಮದ್ ತಲ್ಹಾ ಸಿದ್ದಿಬಾಪ, ರಿಯಾಜ್ ಅಹ್ಮದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.