ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳ ವಹಿವಾಟಿಗೆ ಅನುಕೂಲ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೊಂದರೆ ನಿವಾರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಡಿ.20ರಂದು ಪ್ರಕಟಗೊಂಡ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವ ಕುರಿತು ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ವರದಿಯನ್ನು ಪ್ರಸ್ತಾಪಿಸಿ, ದೈನಂದಿನ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಪತ್ರ ಬರೆದಿದ್ದಾರೆ.

‘ಸಾರ್ವಜನಿಕರು ಮತ್ತು ಪಾದಚಾರಿಗಳಿಗೆ ತೊಂದರೆಯಾಗದಂತೆ ಸುಗಮ ವ್ಯಾಪಾರಕ್ಕೆ ಅನುಕೂಲವಾಗುವಂತೆ, ಬೀದಿಬದಿ ವ್ಯಾಪಾರಿಗಳಿಗೆ ನಿರ್ದಿಷ್ಟ ಸ್ಥಳ ಗುರುತಿಸಿ ವಹಿವಾಟು ನಡೆಸಲು ಅನುಕೂಲ ಕಲ್ಪಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.