ಕೆ.ಆರ್.ಪುರ: ಕೆ.ಆರ್. ಪುರ ಸಮೀಪದ ದೇವಸಂದ್ರದ ಮುಖ್ಯರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ವಿಜೃಂಭಣೆಯಿಂದ ನಡೆಯಿತು.

ಮುಂಜಾನೆ ಅಭಿಷೇಕ, ವಿಶೇಷ ಪೂಜೆ, ಹೋಮ, ಹವನ ನೆರವೇರಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ದೇವಸಂದ್ರ, ಅಯ್ಯಪ್ಪನಗರ, ರಾಮಮೂರ್ತಿನಗರ, ಬಸವನಪುರ, ಹೂಡಿ, ಭಟ್ಟರಹಳ್ಳಿ, ಟಿಸಿ ಪಾಳ್ಯ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್, ಮುಖಂಡರಾದ ಡಿ.ಎ. ಗೋಪಾಲ್, ಚನ್ನಕೇಶವ, ಡಿ.ಕೆ.ದೇವೇಂದ್ರ, ಚಲಪತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.