ಬೆಂಗಳೂರು: ‘ರಾಜ್ಯದ ಕಾರ್ಮಿಕರ ಅಭಿವೃದ್ಧಿ ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಲು ಮುಂಬರುವ ಬಜೆಟ್ನಲ್ಲಿ ₹1,000 ಕೋಟಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.

‘ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯಕ್ಕೆ ₹ 5 ಲಕ್ಷ ನೀಡಬೇಕು. ಕಟ್ಟಡ ಕಾರ್ಮಿಕರರು ಬಸ್ಗಳಲ್ಲಿ ಸಂಚರಿಸಲು ಉಚಿತ ಪಾಸ್ ಒದಗಿಸಬೇಕು. ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕಾರ್ಮಿಕ ಕಲ್ಯಾಣ ಮಂಟಪ ಮತ್ತು ಕಾರ್ಮಿಕ ಸಮುದಾಯ ಭವನ ನಿರ್ಮಿಸಬೇಕು. ಕಾರ್ಮಿಕರಿಗೆ ಕನಿಷ್ಠ ₹ 35 ಸಾವಿರ ಮಾಸಿಕ ವೇತನ ನಿಗದಿಪಡಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.