ಕೆ.ಆರ್.ಪುರ: ಶಾಸಕ ಬೈರತಿ ಬಸವರಾಜ್ ಅವರು ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ವಾಹನ ಸಂಚಾರ ತಡೆದುಪ್ರತಿಭಟನೆ ನಡೆಸಿದರು.

‘ಬೈರತಿ ಬಸವರಾಜ್ ಅವರು 5 ವರ್ಷಗಳ ಕಾಲ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾರೆ ಎಂಬ ವಿಶ್ವಾಸದಿಂದ ಚುನಾವಣೆಯಲ್ಲಿ ಆಯ್ಕೆ ಮಾಡಿದ್ದೇವೆ. ಅವರ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದಿದ್ದಾರೆ. ಕಾಂಗ್ರೆಸ್ಗೆ ಮತ್ತು ಕಾರ್ಯಕರ್ತರಿಗೆ ದ್ರೋಹ ಬಗೆಯಬಾರದು’ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಒತ್ತಾಯಿಸಿದರು.

ಮುಖಂಡ ಎಂ.ಮಂಜುನಾಥ ಮಾತನಾಡಿ, ‘ಅಧಿಕಾರಕ್ಕೆರಲು ಬಿಜೆಪಿ ಅಡ್ಡದಾರಿ ಹಿಡಿದಿದೆ.ಕಾಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡಿ ರಾಜೀನಾಮೆಗೆ ಒತ್ತಡ ಹಾಕಿದೆ. ಇವುಗಳಿಗೆಲ್ಲ ಮಣಿಯದೆ ಬಸವರಾಜ್ ಅವರು ರಾಜೀನಾಮೆ ವಾಪಸ್ ಪಡೆಯಬೇಕು’ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಎಲ್. ಮುನಿಸ್ವಾಮಿ, ಡಿ.ಎಂ.ನಾಗರಾಜ್, ಕೃಷ್ಣಪ್ಪ, ರಾಜೇಂದ್ರ, ಸಾಕಮ್ಮ, ಜೆಡಿಎಸ್ ಮುಖಂಡ ಡಿ.ಎ.ಸುರೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.