ಬೆಂಗಳೂರು: ನ್ಯಾಯಾಲಯದ ನಿರ್ದೇಶನದ ಅನುಸಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಶೌಚಾಲಯಗಳ ಸ್ಥಿತಿಗತಿ ಕುರಿತಂತೆ ಅಧ್ಯಯನ ನಡೆಸಿರುವ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹೈಕೋರ್ಟ್‌ಗೆ ತನ್ನ ವರದಿ ಸಲ್ಲಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ, 'ಲೆಟ್ಸ್ ಕಿಟ್ ಫೌಂಡೇಷನ್' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ಹಾಜರಾಗಿದ್ದ ವಕೀಲ ಶ್ರೀಧರ್ ಪ್ರಭು, ‘ನ್ಯಾಯಪೀಠದ ನಿರ್ದೇಶನದ ಅನುಸಾರ ವರದಿಯನ್ನು ಸಿದ್ಧಪಡಿಸಲಾಗಿದೆ. ಇದನ್ನು ಅರ್ಜಿದಾರರ ಪರ ವಕೀಲರಿಗೂ ನೀಡಲಾಗಿದೆ‘ ಎಂದು ತಿಳಿಸಿದರು.

ಬಿಬಿಎಂಪಿ ವಕೀಲರು, ‘ಶೌಚಾಲಯಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು. ಇದಕ್ಕೆ ನ್ಯಾಯಪೀಠ, ‘ಎಷ್ಟು ಶೌಚಾಲಯಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದೀರಿ ಎಂಬುದರ ವಿವರ ನೀಡಿ. ಶೌಚಾಲಯಗಳ ಸಂಖ್ಯೆ ನಮೂದಿಸದೆ ಸುಮ್ಮನೆ ಟೆಂಡರ್ ಕರೆದರೆ ಹೇಗೆ? ಇದೇ ಕಾರಣಕ್ಕೆ ಕೋರ್ಟ್ ತಡೆ ನೀಡಬಹುದಲ್ಲವೇ?. ಎಷ್ಟು ಶೌಚಾಲಯಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂಬ ಮಾಹಿತಿ ಒದಗಿಸಿ’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ಹಾಜರಾಗಿದ್ದರು.

ವರದಿಯಲ್ಲಿ ಏನಿದೆ?: ’ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ ಒಟ್ಟು 803 ಶೌಚಾಲಯಗಳಿವೆ. ಪಾಲಿಕೆಯು ಹೊಸದಾಗಿ 800 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಹಾಲಿ ಇರುವ 196 ಶೌಚಾಲಯಗಳು ದುಸ್ಥಿತಿಯಲ್ಲಿದ್ದು ಅವುಗಳನ್ನು ನವೀಕರಿಸಬೇಕಾಗಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ರಾಜ್ಯದ 10 ಮಹಾನಗರ ಪಾಲಿಕೆ, 61 ಪುರಸಭೆ ಮತ್ತು 126 ನಗರಸಭೆ ಮತ್ತು 124 ಪಟ್ಟಣ ಪಂಚಾಯ್ತಿ ಸೇರಿದಂತೆ ಒಟ್ಟು 312 ನಗರ ಸ್ಥಳೀಯ ಸಂಸ್ಥೆಗಳಲ್ಲಿ 1,360 ಶೌಚಾಲಯ ಬ್ಲಾಕ್‌ಗಳಿವೆ. ಇವುಗಳಲ್ಲಿ 9,167 ಆಸನಗಳಿವೆ ಮತ್ತು 689 ಆಸನಗಳಿರುವ 108 ಮೂತ್ರಾಲಯಗಳಿವೆ’ ಎಂದು ತಿಳಿಸಲಾಗಿದೆ.

‘ಸ್ವಚ್ಛ ಭಾರತ್ ಮಿಷನ್ ಅಡಿ 3,081 ಆಸನಗಳ 384 ಹೊಸ ಶೌಚಾಲಯ ಬ್ಲಾಕ್‌ಗಳನ್ನು ಹಾಗೂ 2,726 ಮೂತ್ರಾಲಯಗಳಿರುವ 635 ಹೊಸ ಬ್ಲಾಕ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.