ಬೆಂಗಳೂರು: ಕಾಂಗ್ರೆಸ್ ಯುವ ಘಟಕದ ಮುಖಂಡರೊಬ್ಬರ ಹೆಸರನ್ನು ಹೇಳಿಕೊಂಡು ವಿದ್ಯಾರ್ಥಿಯನ್ನು ಅಪಹರಿಸಿ, ಕಿರುಕುಳ ನೀಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಅಡಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ ಬಳಿಕ ಯಾರ ಹೆಸರು ಹೇಳಿಕೊಂಡು ಹಣ ವಸೂಲಿಗಾಗಿ ಕಿರುಕುಳ ನೀಡಿದ್ದರು ಎಂಬುದು ಗೊತ್ತಾಗಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾಲೇಜೊಂದರಲ್ಲಿ ಜೀವನ್ ಜೈನ್ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ₹3 ಲಕ್ಷ ಸಾಲ ಪಡೆದಿದ್ದರು. ಹೇಳಿದ ಸಮಯಕ್ಕೆ ಜೀವನ್‌ಗೆ ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ತಡವಾಗಿ ಸಾಲ ಮರಳಿಸಿದ್ದರು.

‘ಪಡೆದಷ್ಟು ಸಾಲ ಮರಳಿಸಿದ್ದರೂ ಮತ್ತಷ್ಟು ಹಣ ನೀಡುವಂತೆ ಗುಂಪೊಂದು ಒತ್ತಾಯಿಸಿತ್ತು. ಅಲ್ಲದೇ ಜೀವನ್ ಅವರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ವಿದ್ಯಾರ್ಥಿಯನ್ನು ಬೆತ್ತಲೆಗೊಳಿಸಿ ಹಣಕ್ಕಾಗಿ ಕಿರುಕುಳ ನೀಡಲಾಗಿದೆ ಎಂಬ ಆರೋಪವಿದೆ’ ಎಂದು ಮೂಲಗಳು ತಿಳಿಸಿವೆ.

ವಿಡಿಯೊ ಹರಿಯಬಿಡುವ ಬೆದರಿಕೆ: ಬೆತ್ತಲೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗುವುದು ಎಂದು ಬೆದರಿಸಿ ₹6 ಲಕ್ಷವನ್ನು ಕಿಡಿಗೇಡಿಗಳು ಪಡೆದುಕೊಂಡಿದ್ದರು. ಅದಾದ ಮೇಲೂ ಹೆಚ್ಚಿನ ಹಣಕ್ಕೆ ಬೇಡಿಕೆ ಸಲ್ಲಿಸಿದ್ದರು. ಪದೇ ಪದೇ ಹೋಟೆಲ್‌ಗೆ ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.