ಬೆಂಗಳೂರು: ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿ ಧೀರಜ್ಕುಮಾರ್ (14) ಎಂಬಾತ ಬುಧವಾರ ಸಂಜೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ಧೀರಜ್, ಸ್ಥಳೀಯ ಶಾಲೆಯೊಂದರಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿದ್ದ. ಶಾಲೆಯಲ್ಲಿ ಬುಧವಾರ ಮುಖ್ಯ ಪರೀಕ್ಷೆಯಲ್ಲಿ ನಕಲು ಮಾಡುವಾಗ ಧೀರಜ್ ಶಿಕ್ಷಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಪೋಷಕರನ್ನು ಪ್ರಾಶುಂಪಾಲರು ಶಾಲೆಗೆ ಕರೆದಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಪೋಷಕರು ಶಾಲೆಗೆ ಬಂದಿದ್ದರಿಂದ ಸ್ನೇಹಿತರ ಎದುರು ಅವಮಾನವಾಯಿತೆಂದು ಧೀರಜ್ ನೊಂದುಕೊಂಡಿದ್ದ. ಈ ಸಂಗತಿ ಮರಣಪತ್ರದಲ್ಲಿದೆ. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ’ ಎಂದೂ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.