ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ತಂಗಿದ್ದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಪಾವನಾ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದರು. ಪೋಷಕರು ನೀಡಿದ್ದ ಕಾಲೇಜು ಶುಲ್ಕವನ್ನು ಜೂಜಾಟವಾಡಿ ಕಳೆದುಕೊಂಡಿದ್ದರು. ಆ ಹಣ ಹೊಂದಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ’ ಎಂದು ಪೊಲೀಸರು ಹೇಳಿದರು.

‘ಪಾವನಾ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೂರು ದಿನ ರಜೆಯಿದ್ದ ಕಾರಣ ಹಾಸ್ಟೆಲ್ನಲ್ಲಿದ್ದ ಸಹ ಪಾಠಿಗಳು ಊರುಗಳಿಗೆ ತೆರಳಿದ್ದರು. ಹಾಸ್ಟೆಲ್ನಲ್ಲಿ ಭಾನುವಾರ ರಾತ್ರಿ ಒಬ್ಬರೇ ಇದ್ದರು. ಆ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪಾಲಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪೋಷಕರು ಕಾಲೇಜು ಶುಲ್ಕ ಪಾವತಿಸಲು ₹ 15 ಸಾವಿರ ನೀಡಿದ್ದರು. ಅದನ್ನು ಪಾವನಾ ಆನ್ಲೈನ್ ಗೇಮಿಂಗ್ ಬಳಸಿಕೊಂಡು ಸಂಪೂರ್ಣ ಹಣ ಕಳೆದುಕೊಂಡಿದ್ದರು’ ಎಂದು ಗೊತ್ತಾಗಿದೆ.

ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.