ಬೆಂಗಳೂರು: ‘ನಗರದಲ್ಲಿ ಸಂಚಾರ ದಟ್ಟಣೆ ನಿವಾರಿಸಲು ರೂಪಿಸಿರುವ ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಯ ಮೊದಲ ಹಂತದ ಭೂ ಸ್ವಾಧೀನ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ.2026ರ ವೇಳೆಗೆ ಈ ಯೋಜನೆ ಸಿದ್ಧವಾಗಲಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೈಯಪ್ಪನಹಳ್ಳಿ- ಚಿಕ್ಕಬಾಣಾವರ ಮಧ್ಯದ 25 ಕಿ. ಮೀಟರ್ ಮಾರ್ಗದ ಎರಡನೇ ಕಾರಿಡಾರ್ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ನಿರ್ಮಾಣ ಕಾಮಗಾರಿಯ ಟೆಂಡರ್ ಅಂತಿಮಗೊಳಿಸಿ ಕಾರ್ಯಾದೇಶ ನೀಡಲಾಗಿದೆ. ₹ 15,767 ಕೋಟಿ ವೆಚ್ಚದ 148 ಕಿ.ಮೀ. ಯೋಜನೆಯಡಿ 57 ಹೊಸ ನಿಲ್ದಾಣಗಳು ನಿರ್ಮಾಣವಾಗಲಿವೆ’ ಎಂದರು.

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಧ್ಯೆ 41.40 ಕಿ.ವೀ., ಚಂದಾಪುರದ ಹೀಲಲಿಗೆಯಿಂದ ರಾಜಾನುಕುಂಟೆ ಮಧ್ಯೆ 46.24 ಕಿ.ಮೀ., ಕೆಂಗೇರಿ-ವೈಟ್ಫೀಲ್ಡ್ ನಡುವಿನ 35.52 ಕಿ.ಮೀ. ಸೇರಿ 148 ಕಿ.ಮೀ. ಜಾಲ ಉಪನಗರ ರೈಲು ಯೋಜನೆ ಒಳಗೊಂಡಿದೆ. ಈ ಯೋಜನೆಗೆ ರಾಜ್ಯ ಸರ್ಕಾರ ಶೇ 20, ಕೇಂದ್ರ ಸರ್ಕಾರ ಶೇ 20 ಹಾಗೂ ಅಂತರರಾಷ್ಟ್ರೀಯ ಬ್ಯಾಂಕ್ನಿಂದ ಉಳಿದ ಹಣವನ್ನು ಸಾಲವಾಗಿ ಪಡೆಯಲಾಗುವುದು’ ಎಂದೂ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.