ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ-2019 ಅನ್ನು ಅಸಾಂವಿಧಾನಿಕ ಎಂದು ಘೋಷಿಸಲುಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನಗರದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಈ ಅರ್ಜಿ ಸಲ್ಲಿಸಿದ್ದು, ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ.ಪ್ರದೀಪ್ ಸಿಂಗ್ ಯೆರೂರು ಅವ ರಿದ್ದ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಹಾಜರಾಗಿ ಅರ್ಜಿ ವಿಚಾರಣೆಗೆ ಅಂಗೀಕರಿಸುವಂತೆ ಮೆಮೋ ಸಲ್ಲಿಸಿದರು. ಈ ವೇಳೆ ನ್ಯಾಯಪೀಠ, ಇದೇ ವಿಷಯಕ್ಕೆ ಸಂಬಂಧಿಸಿದ ಅರ್ಜಿಯೊಂದು ಈಗಾಗಲೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಾಗಿ ಹೇಳಿದೆ. ಆದ್ದರಿಂದ, ಬುಧವಾರ ಅರ್ಜಿ ಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ ಏನು?: ಧರ್ಮದ ಆಧಾರದ ಮೇಲೆ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಸಂವಿಧಾನದ ಪರಿಚ್ಛೇದ 14ಕ್ಕೆ ವಿರುದ್ಧವಾಗಿದೆ. ಇದು ದೇಶದ ನಾಗರಿಕರ ಮಧ್ಯೆ ತಾರತಮ್ಯ ಮೂಡಿಸುತ್ತದೆ. ಆದ್ದರಿಂದ ತಿದ್ದುಪಡಿ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿರುವ ಅರ್ಜಿದಾರರು, ಪಿಐಎಲ್ ಇತ್ಯರ್ಥಗೊಳ್ಳುವವರೆಗೆ ಕಾಯ್ದೆಯನ್ನು ಜಾರಿಗೆ ತರದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.