ಬೆಂಗಳೂರು: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಅಪರಾಧ ಕಾನೂನುಗಳನ್ನು ತಕ್ಷಣವೇ ರದ್ದುಗೊಳಿಸಬೇಕು’ ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ–ಕಮ್ಯೂನಿಸ್ಟ್ (ಎಸ್ಯುಸಿಐ) ಆಗ್ರಹಿಸಿದೆ.

ಹಿಂದೆ ಜಾರಿಯಲ್ಲಿದ್ದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳ ಬದಲಿಗೆ ನೂತನ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ಸೋಮವಾರದಿಂದ ಜಾರಿಗೊಳಿಸಲಾಗಿದೆ.

‘ವಸಾಹತುಶಾಹಿ ಕಾಲದ ಕಾನೂನುಗಳ ಬದಲಾಗಿ, ನೂತನ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಕೇಂದ್ರ ಹೇಳುತ್ತಿದೆ. ಸಾರ್ವಜನಿಕರು, ನ್ಯಾಯಶಾಸ್ತ್ರಜ್ಞರ ಆಕ್ಷೇಪಗಳನ್ನು ಕಡೆಗಣಿಸಿ ಕೇಂದ್ರ ಸರ್ಕಾರವು ಈ ಕರಾಳ ಕಾನೂನುಗಳನ್ನು ಜಾರಿಗೆ ತಂದಿದೆ’ ಎಂದು ಎಸ್ಯುಸಿಐ ದೂರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.