ಬೆಂಗಳೂರು: ನಿರ್ಣಯ ಕೈಗೊಳ್ಳುವ ಸ್ಥಾನಗಳಲ್ಲಿ ಕೆಲವೇ ಸಮುದಾಯಗಳು ಇರುವ ಬದಲು ಎಲ್ಲ ಸಮುದಾಯಗಳೂ ಇರಬೇಕು. ಎಲ್ಲರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಂದ್ರ ಲೇಔಟ್‌ನಲ್ಲಿರುವ ಕನಕ ಗುರುಪೀಠದ ಶಾಖಾ ಮಠದಲ್ಲಿ ಸೋಮವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಲ್ಲ ಸಮಾಜಗಳಲ್ಲಿ ಪ್ರತಿಭಾವಂತರು ಇರುತ್ತಾರೆ. ಆದರೆ, ಎಲ್ಲ ಕಡೆಗಳಲ್ಲಿ ಒಂದೇ ರೀತಿಯ ಪ್ರೋತ್ಸಾಹ ಇರುವುದಿಲ್ಲ. ಪ್ರತಿಭೆಗಳಿದ್ದರೆ ಸಾಲದು. ಪ್ರತಿಭೆ
ಗಳನ್ನು ಬೆಳೆಸಲು ಪೂರಕವಾದ ವಾತಾವರಣ ನಿರ್ಮಾಣಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಲಿಕೆಯ ಕ್ಷೇತ್ರ ಯಾವುದೇ ಇರಲಿ, ಎಲ್ಲರಲ್ಲಿಯೂ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರಬೇಕು. ಆಗ ಮಾನವೀಯ ವ್ಯಕ್ತಿಯಾಗಲು ಸಾಧ್ಯ. ಸಮಾಜಮುಖಿಯಾಗಲು ಸಾಧ್ಯ ಎಂದರು.

ಪ್ರತಿಭಾ ಪುರಸ್ಕಾರ ಪಡೆದವರು ಮುಂದೆ ಬೇರೆಬೇರೆ ಕ್ಷೇತ್ರಕ್ಕೆ ಹೋಗುತ್ತಾರೆ. ಕೆಲವರು ರಾಜಕೀಯ ಕ್ಷೇತ್ರಕ್ಕೂ ಬರಬಹುದು. ರಾಜಕೀಯಕ್ಕೆ ಬರುವವರು ಅಧಿಕಾರ ಪಡೆಯುವುದನ್ನು ಧ್ಯೇಯವನ್ನಾಗಿಸದೇ ಸೇವೆ ಮಾಡುವುದನ್ನು ಗುರಿಯಾಗಿಸಿಕೊಳ್ಳಬೇಕು ಎಂದರು.

ಇಲ್ಲಿನ ಕನಕ ಗುರುಪೀಠದ ಸ್ಥಳ 30 ವರ್ಷಗಳ ಗುತ್ತಿಗೆಯಲ್ಲಿದೆ. ಅದನ್ನು ಮಠಕ್ಕೇ ನೀಡಲು ಪ್ರಯತ್ನಿಸಲಾಗುವುದು. ವಿದ್ಯಾರ್ಥಿನಿಲಯ ನಿರ್ಮಿಸಬೇಕೆಂಬ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿವಿಧ ಜಿಲ್ಲೆಗಳ 600ಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಚಂದ್ರಾಲೇಔಟ್‌ನ ಮಠದ ಜಮೀನು ಉಳಿಯಲು ಕಾರಣರಾದ ಉಮೇಶ ಸ್ವಾಮೀಜಿ, ಸಾಧಕರಾದ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ. ರವಿ, ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅವರನ್ನು
ಗೌರವಿಸಲಾಯಿತು.

ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕೆ.ಆರ್.ನಗರ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ತಿಂಥಿಣಿ ಬ್ರಿಜ್ ಶಾಖಾ ಮಠದ ಸಿದ್ದರಾಮನಂದಪುರಿ ಸ್ವಾಮಿಜಿ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಪ್ರಿಯಕೃಷ್ಣ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.