ಬೆಂಗಳೂರು: ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಇತ್ತೀಚೆಗಷ್ಟೇ ಸೇವೆಯಿಂದ ಅಮಾನತಾಗಿದ್ದ ಕೆ.ಆರ್. ಪುರ ಠಾಣೆ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರು ಹೃದಯಾಘಾತದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.

ಠಾಣೆ ವ್ಯಾಪ್ತಿಯಲ್ಲಿದ್ದ ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಸಿಸಿಬಿ ದಾಳಿ ಮಾಡಿ, ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು.

ಅವಧಿ ಮೀತಿ ವಹಿವಾಟು ನಡೆಸುತ್ತಿದ್ದ ಬಾರ್ ಆ್ಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ನಂದೀಶ್ ಅವರನ್ನು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.

ಅಮಾನತು ಅವಧಿಯಲ್ಲಿ ನಂದೀಶ್ ಅವರು ಮನೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರು. ಗುರುವಾರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಲಕ್ಷ್ಮಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.