ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲೆ ಚೈತ್ರಾವತಿ ಗೌಡ (34) ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಸಂಜಯ್ ನಗರ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಾವತಿ ಅವರ ಮೃತದೇಹ ಪತ್ತೆಯಾಗಿತ್ತು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಹಾಯಕ ಆಯುಕ್ತ ಶಿವಕುಮಾರ್ ಪತ್ನಿಯಾಗಿದ್ದ ಚೈತ್ರಾವತಿ ಸಾವಿನಲ್ಲಿ ಹಲವು ಸಂಶಯಗಳಿದ್ದವು. ಹೀಗಾಗಿ, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದರು.

‘ಚೈತ್ರಾವತಿ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಹಳೇ ದಿನಾಂಕದ ಮರಣಪತ್ರ:

‘ಚೈತ್ರಾವತಿಗೌಡ ಆತ್ಮಹತ್ಯೆ ಮಾಡಿಕೊಂಡಿದ್ದ ಫ್ಲ್ಯಾಟ್ನಲ್ಲಿ ಮರಣಪತ್ರ ಸಿಕ್ಕಿತ್ತು. ಆದರೆ, ಅದರಲ್ಲಿ ಹಳೇ ದಿನಾಂಕ ನಮೂದಿಸಲಾಗಿತ್ತು. ಇದು ಸಂಶಯಕ್ಕೆ ಕಾರಣವಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಚೈತ್ರಾ ಅವರ ಮೊಬೈಲ್ ಕರೆಗಳ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗುತ್ತಿದೆ. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ ಪತಿ, ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು ಹಾಗೂ ಇತರರನ್ನು ವಿಚಾರಣೆ ನಡೆಸಬೇಕಿದೆ’ ಎಂದು ತಿಳಿಸಿವೆ.

‘ಮರಣೋತ್ತರ ಪರೀಕ್ಷೆ ವರದಿ ಪರಿಶೀಲಿಸಲಾಗುತ್ತಿದೆ. ಕೌಟುಂಬಿಕ, ವೃತ್ತಿ ಸೇರಿದಂತೆ ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.