ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಮೂಲದ ದೀಪಾ (36) ಮೃತಪಟ್ಟವರು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪತಿ ಸುರೇಶ್ ಅವರೊಂದಿಗೆ ವಾಸಿಸುತ್ತಿದ್ದರು.

‘ದೀಪಾ ಅವರು ಗೃಹಿಣಿ. ಇವರ ಪತಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ನಾನಾ ಕಾರಣಕ್ಕೆ ಸುರೇಶ್ ಅವರು ಬ್ಯಾಂಕ್ ಹಾಗೂ ಖಾಸಗಿಯವರಿಂದ ದೊಡ್ಡ ಮೊತ್ತದ ಸಾಲ ಪಡೆದಿದ್ದರು ಎನ್ನಲಾಗಿದೆ. ಆರ್ಥಿಕ ಸಮಸ್ಯೆಯಿಂದ ಅವರಿಗೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇದೇ ವಿಚಾರಕ್ಕೆ ದಂಪತಿ ಮಧ್ಯೆ ಜಗಳ ನಡೆಯುತ್ತಿತ್ತು’ ಎಂದು ಪೊಲೀಸರು ಹೇಳಿದರು.

‘ಸೋಮವಾರ ಮಧ್ಯಾಹ್ನವೂ ದಂಪತಿ ಮಧ್ಯೆ ಜೋರು ಗಲಾಟೆ ನಡೆದಿತ್ತು. ಅದಾದ ಕೆಲವೇ ಕ್ಷಣಗಳಲ್ಲಿ ಗೃಹಿಣಿ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂಬುದಾಗಿ ಕಂಡು ಬಂದಿದೆ. ತನಿಖೆ ಬಳಿಕ ಗೃಹಿಣಿಯ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ಹೇಳಿದರು.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.