ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತಹಶೀಲ್ದಾರ್ ಜಿ.ಬಿ.ಜಕ್ಕನಗೌಡರ್(54) ಅವರ ಮೃತದೇಹವನ್ನು ಅವರ ಕುಟುಂಬಸ್ಥರಿಗೆ ಗುರುವಾರ ಬೆಳಿಗ್ಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಹಸ್ತಾಂತರಿಸಿದರು.

‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಹಸ್ತಾಂತರ ಮಾಡಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪ್ರಾಥಮಿಕ ವರದಿ ಸಲ್ಲಿಸಿದ್ದು, ಹೃದಯಾಘಾತದಿಂದ ಜಕ್ಕನಗೌಡರ್ ಮೃತಪಟ್ಟಿದ್ದಾರೆ ಎಂಬುದಾಗಿ ಉಲ್ಲೇಖಿಸಿದ್ದಾರೆ. ಅಂತಿಮ ವರದಿ ಬರಬೇಕಿದೆ’ ಎಂದು ಪೊಲೀಸರು ತಿಳಿಸಿದರು.

‘ಸೋಮವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿದ್ದ ಜಕ್ಕನಗೌಡರ್ ಅವರು ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೆಲಸ ಮುಗಿದ ಬಳಿಕ ಮೆಜೆಸ್ಟಿಕ್ ಸಮೀಪದ ವೈಭವ್ ಲಾಡ್ಜ್ನಲ್ಲಿ ತಂಗಿದ್ದರು. ಮಂಗಳವಾರವೂ ಅದೇ ಲಾಡ್ಜ್ನಲ್ಲಿ ವಾಸ್ತವ್ಯ ಮಾಡಿದ್ದರು. ಮಂಗಳವಾರ ರಾತ್ರಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.