ಬೆಂಗಳೂರು: ನಗರದ ತಾಜ್ ವೆಸ್ಟ್ ಎಂಡ್ ಹಾಗೂ ಒಟೆರಾ ಹೋಟೆಲ್ಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ಇದರಿಂದ ಕೆಲಕಾಲ ಆತಂ
ಕದ ವಾತಾವರಣ ನಿರ್ಮಾಣವಾಗಿತ್ತು.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ತಾಜ್ ವೆಸ್ಟ್ ಎಂಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಒಟೆರಾ ಹೋಟೆಲ್ಗೆ ಶುಕ್ರವಾರ ತಡರಾತ್ರಿ ಒಂದೇ ವಿಳಾಸದಿಂದ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ಇ–ಮೇಲ್ ಬೆದರಿಕೆ ಸಂದೇಶ ಗಮನಿಸಿದ ತಕ್ಷಣವೇ ಹೋಟೆಲ್ ಸಿಬ್ಬಂದಿ, ಗ್ರಾಹಕರೊಂದಿಗೆ ಹೊರ ಬಂದು, ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬೆದರಿಕೆ ಸಂದೇಶ ಎಂದು ಗೊತ್ತಾಯಿತು. ಎಲ್ಲರೂ ನಿರಾಳರಾದರು.

‘ಎರಡೂ ಹೋಟೆಲ್ಗಳಲ್ಲೂ ಬಾಂಬ್ ನಿಷ್ಕ್ರಿಯ, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಪರಿ
ಶೀಲನೆ ನಡೆಸಿದರು. ಕೊಠಡಿ ಹಾಗೂ ಆವ
ರಣ ಪರಿಶೀಲಿಸಲಾಯಿತು. ಯಾವುದೇ ಸ್ಫೋಟಕ ವಸ್ತು ಅಥವಾ ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ರಾಜಕಾರಣಿಗಳು, ಅಂತರರಾಷ್ಟ್ರೀಯ ಕ್ರೀಡಾಪಟುಗಳು ಹಾಗೂ ವಿದೇಶಿ ಗಣ್ಯರು ವಾಸ್ತವ್ಯ ಮಾಡುತ್ತಾರೆ. ಗ್ರಾಹಕರು ಹಾಗೂ ಸಿಬ್ಬಂದಿ ಬೆದರಿಸಲು ಇ–ಮೇಲ್ ರವಾನೆ ಮಾಡಿರುವ ಸಾಧ್ಯತೆಯಿದೆ. ಇ–ಮೇಲ್ ವಿಳಾಸ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಸೈಬರ್ ತಜ್ಞರಿಗೂ ಮಾಹಿತಿ ನೀಡಲಾಗಿದೆ. ವಿದೇಶದಲ್ಲಿ ಕುಳಿತು ಇ–ಮೇಲ್ ಕಳುಹಿಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇಂಟರ್ ಪೋಲ್ಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.ಬೆಂಗಳೂರು: ನಗರದ ಪ್ರಮುಖ ಹೋಟೆಲ್ ತಾಜ್ ವೆಸ್ಟ್ ಎಂಡ್ಗೆ ಇ–ಮೇಲ್ ಮೂಲಕ ಇಂದು (ಶನಿವಾರ) ಬಾಂಬ್ ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಸಂದೇಶ ಕಳುಹಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಬೆದರಿಕೆ ಸಂದೇಶ ಗಮನಿಸಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿದ್ದಾರೆ.

'ಬೆಂಗಳೂರಿನಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಅಪರಿಚಿತ ದುಷ್ಕರ್ಮಿಗಳು ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗುತ್ತಿದೆ' ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.