ಬೆಂಗಳೂರು: ಕೆಲವು ವರ್ಷಗಳಿಂದ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಬುಧವಾರ ಮಂತ್ರಿ ಸ್ಕ್ವೇರ್ ಮಾಲ್ಗೆ ಬೀಗ ಹಾಕಿದ್ದಾರೆ.

ನಾಲ್ಕು ವರ್ಷಗಳಿಂದ ತೆರಿಗೆ ಪಾವತಿಸಿರಲಿಲ್ಲ. ಇಲ್ಲಿವರೆಗಿನ ಬಾಕಿ ಮೊತ್ತ ₹ 51 ಕೋಟಿ ಆಗಿತ್ತು. ಫೆಬ್ರುವರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಪೀಠೋಪಕರಣ ಜಪ್ತಿ ಮಾಡಲು ಹೋಗಿದ್ದರು. ಮಂತ್ರಿ ಸ್ಕ್ವೇರ್ ಮಾಲ್ನ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರಿಂದ ವಾಪಸಾಗಿದ್ದರು. ಆ ಸಂದರ್ಭದಲ್ಲಿ ತೆರಿಗೆ ಪಾವತಿಸಲು ಸೂಚಿಸಲಾಗಿತ್ತು.

ತೆರಿಗೆ ಪಾವತಿಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಬುಧವಾರ ಬಿಬಿಎಂಪಿ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಮಾಲ್ಗೆ ತೆರಳಿ ಗ್ರಾಹಕರನ್ನು ಹೊರಗೆ ಕಳುಹಿಸಿ ಮುಖ್ಯದ್ವಾರಕ್ಕೆ ಬೀಗ ಹಾಕಿದರು.

‘ಕೆಲವು ವರ್ಷಗಳಿಂದ ತೆರಿಗೆ ಪಾವತಿಸಿಲ್ಲ. ಈಗ ಬೀಗ ಹಾಕಿ ಸೀಲ್ ಮಾಡಿದ್ದೇವೆ. ಅವರ ಮೇಲೆ ಎಫ್ಐಆರ್ ದಾಖಲು ಮಾಡುತ್ತೇವೆ. ಆಗಲೂ ತೆರಿಗೆ ಪಾವತಿಸದೇ ಇದ್ದರೆ ಬೇರೆ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ/ಐಟಿ) ಮುನೀಶ್ ಮೌದ್ಗಿಲ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.