ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಕಾರಣಕ್ಕೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಇದೇ 22 ಮತ್ತು 27ರಂದು ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುವುದರಿಂದ ಡಿ.16ರಿಂದಲೇ ಶಿಕ್ಷಕರು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳಲಿದ್ದಾರೆ. ಜಿಲ್ಲಾ ಉಪನಿರ್ದೇಶಕರ ಹಂತದಲ್ಲಿ ಮಂಜೂರಾದ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಳಲ್ಲಿ ಬದಲಾವಣೆಗಳಾಗಿವೆ. ಮ್ಯಾಪಿಂಗ್ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಈ ಎಲ್ಲ ಕಾರಣಗಳಿಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕರಿಸಿದೆ.

ಶಿಕ್ಷಕರ ಸೇವಾ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಒಗಳ ಹಂತದಲ್ಲಿ ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ, ಪದೋನ್ನತಿ ಹೊಂದಿದ ಶಿಕ್ಷಕರ ಮಾಹಿತಿಯನ್ನು ಗಣಕೀಕರಣಗೊಳಿಸುವ ಕೆಲಸಗಳು ಕೂಡಾ ಪೂರ್ಣಗೊಂಡಿಲ್ಲ. ಹೀಗಾಗಿ, ದಿನಾಂಕ ಪರಿಷ್ಕರಿಸಲಾಗಿದ್ದು, ಜಿಲ್ಲಾ ಹಂತ, ವಿಭಾಗದ ಹಂತ, ಅಂತರ್ ವಿಭಾಗ ಹಂತದ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ದಿನಾಂಕ ಸೇರಿ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.