ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಮಕಾತಿ ಅಕ್ರಮ: ಬಂಧಿತ ಮೂವರು ಶಿಕ್ಷಕರಿಗೆ ಜಾಮೀನು

ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ
Last Updated 14 ಡಿಸೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಡಿ.2ರಂದು ಕಾರ್ಯಾಚರಣೆ ನಡೆಸಿ ಬಂಧಿಸಿದ್ದ ನಾಲ್ವರು ಶಿಕ್ಷಕರಲ್ಲಿ ಮೂವರಿಗೆ ಬುಧವಾರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ 2012–13 ಹಾಗೂ 2014–15ನೇ ಸಾಲಿನಲ್ಲಿ ನಡೆಸಿದ್ದ ಸಹ ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ತಂಡ ನಡೆಸುತ್ತಿದೆ.

ಕೋಲಾರ ಜಿಲ್ಲೆ ಕೆಜಿಎಫ್‌ನ ಗೋಣಮಾಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೋಮನಗೌಡ ಗೋನಾಳ, ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಶಾಲೆಯ ವಿ.ಜಯಪ್ಪ, ಹೊಸಪೇಟೆಯ ಕೊರಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ.ಯೋಗೇಶಪ್ಪ ಅವರಿಗೆ ಜಾಮೀನು ದೊರೆತಿದೆ. ಇದೇ ಪ್ರಕರಣದಲ್ಲಿ ವಿಜಯಪುರದ ರಾಠೋಡ್‌ ಅವರನ್ನೂ ಬಂಧಿಸಲಾಗಿತ್ತು.

ಕೆಲವು ದಿನಗಳ ಹಿಂದೆ ಸೋಮನಗೌಡ ಅವರು ರಜೆ ಹಾಕಿ ತಲೆಮರೆಸಿಕೊಂಡಿದ್ದರು. ಕಾರ್ಯಾಚರಣೆ ನಡೆಸಿ ಬಂಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT