ಬೆಂಗಳೂರು: ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟೆಕಿಯೊಬ್ಬರು ಅಪಾರ್ಟ್‌ಮೆಂಟ್‌ನ 21ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧಾರವಾಡದ ಸಾರಂಗ್ ಕುಲಕರ್ಣಿ(27) ಆತ್ಮಹತ್ಯೆ ಮಾಡಿಕೊಂಡವರು.

‘ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಾರಂಗ್, ಸರ್ಜಾಪುರ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನ 21ನೇ ಮಹಡಿಯ ಫ್ಲ್ಯಾಟ್‌ನಲ್ಲಿ ಒಬ್ಬರೇ ನೆಲೆಸಿದ್ದರು. ಇವರ ಪೋಷಕರು ಜೆ.ಪಿ.ನಗರದಲ್ಲಿ ವಾಸವಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ವೈಯಕ್ತಿಕ ಕಾರಣಕ್ಕೆ ಎರಡು ತಿಂಗಳ ಹಿಂದೆ ಕೆಲಸ ತೊರೆದಿದ್ದ ಸಾರಂಗ್ ಕುಲಕರ್ಣಿ, ಬೇರೆ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ತಾನು ವಾಸವಾಗಿದ್ದ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ತಾನು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ’ ಎಂದು ಪೋಷಕರ ಬಳಿ ಪದೇಪದೇ ಹೇಳಿಕೊಳ್ಳುತ್ತಿದ್ದರು ಎಂಬುದು ಗೊತ್ತಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ’ ಎಂದು ಪೊಲೀಸರು ಶಂಕಿಸಿದ್ದಾರೆ. ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.