ಬೆಂಗಳೂರು: ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿತ್ತು.

ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಕೊನೆಯಲ್ಲಿ ನಿಂತಿದ್ದ ಪ್ರಯಾಣಿಕನೊಬ್ಬ ಬರುತ್ತಿದ್ದ ರೈಲಿನ ಮುಂದೆ ಜಿಗಿದಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್ ಸಿಬ್ಬಂದಿ, ಆತನನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ವೇಳೆ, ನಾಲ್ಕು ರೈಲುಗಳ ಸಂಚಾರವನ್ನು ಅವುಗಳು ಇದ್ದ ನಿಲ್ದಾಣಗಳಲ್ಲೇ ಸ್ಥಗಿತಗೊಳಿಸಲಾಯಿತು. ಅದರಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ.

ಈ ಘಟನೆ ನಂತರ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಸಂಚಾರ ನಡೆಸಲಾಯಿತು.

ಹಸಿರು ಮಾರ್ಗದ ಸಂಪೂರ್ಣ ಕಾರ್ಯಾಚರಣೆಯು ರಾತ್ರಿ 8 ರ ನಂತರ ಪುನರಾರಂಭವಾಗಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.