ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಗರದ ವಾತಾವರಣದಲ್ಲಿ ಉಷ್ಣಾಂಶ ಕುಸಿತವಾಗಿದೆ. ಇದರಿಂದಾಗಿ ಮಂಗಳವಾರ ದಿನದ ಬಹುತೇಕ ಅವಧಿ ಚಳಿ ಕಾಣಿಸಿಕೊಂಡಿತ್ತು.

ಮೋಡ ಕವಿದ ವಾತಾವರಣದಿಂದ ಗರಿಷ್ಠ ಉಷ್ಣಾಂಶ ನಾಲ್ಕು ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿತವಾಗಿತ್ತು. ಗರಿಷ್ಠ ಉಷ್ಣಾಂಶ ಮಧ್ಯಾಹ್ನದ ಅವಧಿಗೆ 24 ಡಿಗ್ರಿ ಸೆಲ್ಸಿಯಸ್ಗೆ ಇಳಿದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು. ನಿರಂತರ ಗಾಳಿಯಿಂದಾಗಿ ವಾತಾವರಣ ತಂಪಾಗಿ, ಚಳಿ ಹೆಚ್ಚಳವಾಗಿತ್ತು.

ನಗರದಲ್ಲಿ ಕೆಲ ದಿನಗಳಿಂದ ತಾಪಮಾನ ಕುಸಿತ ಕಂಡಿದ್ದು, ಮುಂಜಾನೆ ಮತ್ತು ಸಂಜೆಯ ಅವಧಿಯಲ್ಲಿ ಚಳಿ ಕಾಣಿಸಿಕೊಳ್ಳುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಎರಡು ವಾರಗಳಿಂದ ಸರಾಸರಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬುಧವಾರ ಹಾಗೂ ಗುರುವಾರವೂ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.