ಬೊಮ್ಮನಹಳ್ಳಿ: ‘ನಾಲ್ಕನೇ ಬಾರಿ ಶಾಸಕನಾಗಿ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಿದ ಬೊಮ್ಮನಹಳ್ಳಿ ಮಹಾ ಜನತೆಯ ಋಣವನ್ನು ಎಂದಿಗೂ ಮರೆಯಲಾರೆ’ ಎಂದು ಶಾಸಕ ಸತೀಶ್ ರೆಡ್ಡಿ ಹೇಳಿದರು.

ಎಚ್ಎಸ್ಆರ್ ಬಡಾವಣೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಕೃತಜ್ಞತಾ ಸಮಾರಂಭ’ದಲ್ಲಿ ಅವರು ಮಾತನಾಡಿದರು.

‘ಎಚ್ಎಸ್ಆರ್ ಬಡಾವಣೆಯಿಂದ ಸಾರಕ್ಕಿ ಕೆರೆ ತನಕ ಸುಮಾರು 48 ಕಡೆಗಳಲ್ಲಿ ನೆರೆ ಸಂಭವಿಸುತ್ತಿತ್ತು. ಇದೀಗ ಬೊಮ್ಮನಹಳ್ಳಿ ಪ್ರದೇಶ ನೆರೆಯಿಂದ ಮುಕ್ತವಾಗಿದೆ. ಐದು ವರ್ಷಗಳ ಸಮಯವನ್ನು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೀಸಲಿಡುತ್ತೇನೆ’ ಎಂದು ಭರವಸೆ ನೀಡಿದರು.

‘ಸೋತ ಕಾಂಗ್ರೆಸ್ ಅಭ್ಯರ್ಥಿ ಅಭಿವೃದ್ಧಿಗೆ ಅಡ್ಡಿಪಡಿಸುವ ಹತಾಶೆಯ ಮಾತುಗಳನ್ನಾಡಿದ್ದಾರೆ. ಇದಕ್ಕೆ ಜನರೇ ಪಾಠ ಕಲಿಸುತ್ತಾರೆ’ ಎಂದರು.

‘ಶಾಸಕನಾಗಿ ಶಾಸನ ಸಭೆಯಲ್ಲಿ ಕ್ಷೇತ್ರ ಮತ್ತು ರಾಜ್ಯದ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಾಗೆಯೇ ರಾಜ್ಯದ ಜನರಿಗೆ ‘ಗ್ಯಾರಂಟಿ’ ಆಶ್ವಾಸನೆ ನೀಡಿರುವ ಕಾಂಗ್ರೆಸ್ ನುಡಿದಂತೆ ನಡೆಯಬೇಕು‘ ಎಂದು ಒತ್ತಾಯಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಸುಮಾರು 10 ಸಾವಿರ ಜನರಿಗೆ ಮಾಂಸದೂಟ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ಬಿಜೆಪಿ ಅರಕೆರೆ ಬ್ಲಾಕ್ ಅಧ್ಯಕ್ಷ ಮಂಜುನಾಥ್, ಸೋಮಸಂದ್ರಪಾಳ್ಯ ಶ್ರೀನಿವಾಸರೆಡ್ಡಿ, ಮಾಜಿ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.