ಬೆಂಗಳೂರು: ವಿಜಯಪುರವನ್ನು ಕೇಂದ್ರ ಸ್ಥಾನ ಮಾಡಿಕೊಂಡು ಆಳ್ವಿಕೆ ನಡೆಸಿದ್ದ ಆದಿಲ್ ಶಾಹಿಗಳ ಕಾಲದ ಪರ್ಷಿಯನ್, ಅರೇಬಿಕ್ ಮತ್ತು ದಖನಿ ಉರ್ದು ಗ್ರಂಥಗಳು ಹಾಗೂ ದಾಖಲೆಗಳ ಕನ್ನಡ ಅನುವಾದದ 19 ಸಂಪುಟಗಳನ್ನು ಭಾನುವಾರ ಬಿಡುಗಡೆ ಮಾಡಲಾಗುವುದು ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಕೃಷ್ಣ ಕೊಲ್ಹಾರ ಕುಲಕರ್ಣಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಬಸವ ಸಮಿತಿ ಸಭಾಂಗಣದಲ್ಲಿ ಭಾನುವಾರ ಸಂಜೆ 4 ಗಂಟೆಗೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಕೃತಿಗಳನ್ನು ಬಿಡುಗಡೆ ಮಾಡುವರು. ಲೇಖಕ ಸುಧೀಂದ್ರ ಕುಲಕರ್ಣಿ, ಕಾಂಗ್ರೆಸ್ ನಾಯಕ ಕೆ. ರೆಹಮಾನ್ ಖಾನ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರವು ಆದಿಲ್ ಶಾಹಿಗಳ ಕಾಲದ ಪರ್ಷಿಯನ್, ಅರೇಬಿಕ್ ಮತ್ತು ದಖನಿ ಉರ್ದು ಗ್ರಂಥಗಳು ಹಾಗೂ ದಾಖಲೆಗಳನ್ನು ಕನ್ನಡಕ್ಕೆ ಅನುವಾದಿಸಿದೆ. ನಾಲ್ಕು ವರ್ಷಗಳ ಕಾಲ 20 ಜನರು ಈ ಅನುವಾದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. 19 ಸಂಪುಟಗಳಲ್ಲಿ 21 ಕೃತಿಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಗೆ ₹1.10 ಕೋಟಿ ವೆಚ್ಚವಾಗಿದೆ. ₹75 ಲಕ್ಷ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಿತ್ತು ಎಂದರು.

ಕಾಂಗ್ರೆಸ್ ಮುಖಂಡ ಮನ್ಸೂರ್ ಅಲಿ ಖಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.